ತಮಕೂರಲ್ಲಿ ಟಿ.ಬಿ. ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಬೆಂಗಳೂರು ಆಸ್ಪತ್ರೆಗೆ ಮಾಜಿ ಸಚಿವ ದಾಖಲು

tbj car accident
Published on

ತುಮಕೂರು: ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಜಯಚಂದ್ರ ಗಾಯಗೊಂಡಿದ್ದಾರೆ.

ಮಂಗಳವಾರ ರಾತ್ರಿ ಫಾರ್ಚುನರ್ ಕಾರಿನಲ್ಲಿ ಟಿ.ಬಿ.ಜಯಚಂದ್ರ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ತುಮಕೂರು ತಾಲೂಕಿನ ಸಿಬಿ ಕ್ರಾಸ್​ ಬಳಿ ಚಾಲಕ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಪಲ್ಟಿಯಾಗಿದೆ. ಪ್ರಾಣಾಪಾಯದಿಂದ ಜಯಚಂದ್ರ, ಕಾರು ಚಾಲಕ ಮತ್ತು ಗನ್ ಮ್ಯಾನ್ ಪಾರಾಗಿದ್ದಾರೆ. ಮಾಜಿ ಸಚಿವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Koo App
ಮಾಜಿ‌ ಸಚಿವರಾದ ಶ್ರೀ ಟಿ.ಬಿ ಜಯಚಂದ್ರ ಅವರು ಪ್ರಯಾಣಿಸುತ್ತಿದ್ದ ಕಾರು ತುಮಕೂರಿನ ಬಳಿ ಅಪಘಾತಕ್ಕೀಡಾಗಿರುವ ವಿಷಯ ತಿಳಿದು ಮನಸ್ಸಿಗೆ ನೋವಾಯಿತು. ಶ್ರೀಯುತರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.-D K Shivakumar (@dkshivakumar_official)20 Apr 2022
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net