ಎಚ್​​ಡಿಕೆ ಫೋಟೋ ಇರಿಸಿ ಲಕ್ಷ್ಮೀ ಪೂಜೆ ಮಾಡಿದ ಅಭಿಮಾನಿ; 2023ರಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕೆಂಬ ಮಹದಾಸೆ!

Kumaraswamy
Published on

ಕೊಪ್ಪಳ: ದೀಪಾವಳಿ ಹಬ್ಬದ ಲಕ್ಷ್ಮೀ ಪೂಜೆ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭಾವಚಿತ್ರವನ್ನಿಟ್ಟು ಪೂಜೆ ಮಾಡಿದ್ದಾನೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದಲ್ಲಿ ನಿಂಗಪ್ಪ ವಿ ಜಿಗೇರಿ ಎಂಬಾತ ಪೂಜೆ ಮಾಡಿದ್ದಾನೆ. ಇದೀಗ ಈ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.

ರೈತರ ಬಗ್ಗೆ ಕಾಳಜಿ ಇರುವ ಏಕೈಕ ವ್ಯಕ್ತಿಯೆಂದರೆ ಅದು ಕುಮಾರಸ್ವಾಮಿ ಮಾತ್ರ. ಎಲ್ಲಾ ಪಕ್ಷದವರಿಗೂ ಆಡಳಿತ ನಡೆಸಲು ಒಂದೊಂದು ಬಾರಿ ಅವಕಾಶ ಮಾಡಿಕೊಟ್ಟಿದ್ದೀರಿ. ಹೀಗಾಗಿ 2023ರ ಚುನಾವಣೆಯಲ್ಲಿ ಎಲ್ಲರೂ ಕುಮಾರಸ್ವಾಮಿ ಅವರನ್ನು ಬೆಂಬಲಿಸಿ ಎಂದು ಅಭಿಮಾನಿ ನಿಂಗಪ್ಪ ವಿ ಜಿಗೇರಿ ಪೂಜೆ ಮಾಡಿದ್ದಾನೆ.

2023ರಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕು ಎಂದು ಪೂಜೆ ಸಲ್ಲಿಸಿರುವುದಾಗಿ ಎಚ್​​​ಡಿಕೆ ಅಭಿಮಾನಿ ತಿಳಿಸಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net