

ರಟ್ಟಿಹಳ್ಳಿ: ಎತ್ತಿನ ಚಕ್ಕಡಿಯಿಂದ ಬಿದ್ದು ರೈತರೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಇಂಗಳಗೊಂದಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.
ಗ್ರಾಮದ ನಾಗಪ್ಪ ದ್ಯಾಮಪ್ಪ ಅಡಿವೆಣ್ಣನವರ (60) ಮೃತ ದುರ್ದೈವಿ.
ಇವರು ಎತ್ತಿನ ಚಕ್ಕಡಿಯಲ್ಲಿ ಮನೆಗೆ ಬರುತ್ತಿದ್ದ ಸಮಯದಲ್ಲಿ ಎತ್ತಿನ ಚಕ್ಕಡಿಯಿಂದ ಕೆಳಗೆ ಬಿದ್ದು ಗಾಯಗೊಂಡಿದ್ದರು. ಕೂಡಲೇ ಅವರಿಗೆ ಹಿರೇಕೆರೂರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದ ಸಮಯದಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.