

ಸವಣೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೊಂಡೂರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಬಸವರಾಜ ಉಡಚಪ್ಪ ರ್ಬಾ (46) ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 3.75 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ಮನನೊಂದು ಜಮೀನಿನಲ್ಲಿದ್ದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.