ಕ್ರಿಮಿನಾಶಕ ಸೇವಿಸಿದ್ದ ರೈತ ಮೃತ

IMG_20240515_163420
Published on

ಬೈಲಕುಪ್ಪೆ: ಹೊಟ್ಟೆನೋವು ತಾಳಲಾರದೆ ಕ್ರಿಮಿನಾಶಕ ಸೇವಿಸಿದ್ದ ರೈತ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ.

ಪಿರಿಯಾಪಟ್ಟಣ ತಾಲೂಕಿನ ದೊಡ್ಡ ಹರವೆ ಗ್ರಾಮದ ನಿವಾಸಿ ಶ್ರೀನಿವಾಸ್(40) ಮೃತರು. ಇವರಿಗೆ ಆಗಾಗ ಹೊಟ್ಟೆ ನೋವು ಬರುತ್ತಿತ್ತು. ಶನಿವಾರ ನೋವು ತೀವ್ರವಾದ ಹಿನ್ನೆಲೆಯಲ್ಲಿ ಕ್ರಿಮಿನಾಶಕ ಕುಡಿದಿದ್ದಾರೆ. ಕುಟುಂಬಸ್ಥರು ತಕ್ಷಣ ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಶ್ರೀನಿವಾಸ್ ಕೊನೆಯುಸಿರೆಳೆದಿದ್ದಾರೆ.

ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಮೃತನ ತಂದೆ ಮಟಗಿರಿ ಅವರ ದೂರಿನ ಮೇರೆಗೆ ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ದೇಹ ಒಪ್ಪಿಸಲಾಯಿತು. ಅಂತ್ಯಕ್ರಿಯೆ ಮೃತರ ಜಮೀನಿನಲ್ಲಿ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net