

ನರಗುಂದ: ಕ್ರಿಮಿನಾಶಕ ಕುಡಿದು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ಸೋಮವಾರ ಸಂಭವಿಸಿದೆ.
ನಗರದ ಹೊಸೂರ ಬಡಾವಣೆಯ ನಿವಾಸಿ ಪುಲಕೇಶಿ ಶಿವಪ್ಪ ಹಟ್ಟಿ (42) ಆತ್ಮಹತ್ಯೆ ಮಾಡಿಕೊಂಡಿದ್ದು, ಕೃಷಿಗಾಗಿ 2014ರಲ್ಲಿ ಹುಬ್ಬಳ್ಳಿಯ ಖಾಸಗಿ ಬ್ಯಾಂಕ್‌ನಲ್ಲಿ 8.25 ಲಕ್ಷ ರೂ. ಸಾಲ ಮಾಡಿದ್ದರು. ಬೆಳೆ ಸರಿಯಾಗಿ ಬಾರದೆ ತೀವ್ರವಾಗಿ ನೊಂದಿದ್ದರು. ಸೋಮವಾರ ಬೆಳಗ್ಗೆ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಪುಲಕೇಶಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ. ಮೊಹರಂ ನಿಮಿತ್ತ 7 ದಿನ ಕರ್ತವ್ಯ ನಿರ್ವಹಿಸಿದ್ದರು. ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರಿಗೂ ಆಶ್ಚರ್ಯ ತರಿಸಿದೆ. ಮೃತನ ಪತ್ನಿ ರತ್ನಾ ಹಟ್ಟಿ ನರಗುಂದ ಠಾಣೆಗೆ ದೂರು ನೀಡಿದ್ದಾರೆ.