ಮಲ್ಲನಕುಪ್ಪೆಯಲ್ಲಿ ದಂಡಿಮಾರಮ್ಮ ಪರ ಹಬ್ಬ

30M.D.R.6
ಮಲ್ಲನಕುಪ್ಪೆ ಗ್ರಾಮದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.
Published on

ಮದ್ದೂರು: ತಾಲೂಕಿನ ಆತಗೂರು ಹೋಬಳಿಯ ಮಲ್ಲನಕುಪ್ಪೆ ಗ್ರಾಮದಲ್ಲಿ ಶ್ರೀ ದಂಡಿಮಾರಮ್ಮ ಪರ ಹಬ್ಬ ಭಕ್ತರ ಸಮ್ಮುಖದಲ್ಲಿ ಮಂಗಳವಾರ ಸಂಭ್ರಮದಿಂದ ನಡೆಯಿತು.

ಈ ಬಾರಿಯೂ ದೇಗುಲವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಇಡೀ ಗ್ರಾಮವೇ ಮದುವಣಗಿತ್ತಿಯಂತೆ ಹಸಿರು ತಳಿರು-ತೋರಣಗಳಿಂದ ಕಂಗೊಳಿಸುತ್ತಿತ್ತು.

ದಂಡಿಮಾರಮ್ಮನ ದೇವಸ್ಥಾನದ ಟ್ರಸ್ಟ್ ವತಿಯಿಂದ ಮಧ್ಯಾಹ್ನ 40 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಪರ ಅಂಗವಾಗಿ ದೇವಾಲಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿತು. ಮಲ್ಲನಕುಪ್ಪೆ ಸೇರಿದಂತೆ ವಿವಿಧ ಗ್ರಾಮಗಳಿಂದ ಗ್ರಾಮಸ್ಥರು ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಹಬ್ಬದ ಅಂಗವಾಗಿ ಸೋಮವಾರ ರಾತ್ರಿ 10.30 ಕ್ಕೆ ಹೊಳೆಯಿಂದ ಹೂ, ಹೊಂಬಾಳೆ ಮತ್ತು ದೇವರ ಮೆರವಣಿಗೆ ಮಾಡಲಾಯಿತು. ಈ ವೇಳೆ ಗ್ರಾಮಸ್ಥರು ದೇವರಿಗೆ ವಿಶೇಷ ಪೂಜೆ ಮಾಡಿ ಬರಮಾಡಿಕೊಂಡರು.

ಟ್ರಸ್ಟ್ ಅಧ್ಯಕ್ಷ ಎಂ.ಡಿ.ಮಹದೇವು, ಗೌರವ ಅಧ್ಯಕ್ಷ ಡಿ.ಕೃಷ್ಣ, ಕಾರ್ಯದರ್ಶಿ ಎಂ.ಮಹದೇವಯ್ಯ, ಖಜಾಂಚಿ ಪಿ.ಸಿದ್ದರಾಜು ಸೇರಿದಂತೆ ಟ್ರಸ್ಟ್‌ನ ಪದಾಧಿಕಾರಿಗಳು, ಗ್ರಾಮದ ಯಜಮಾನರು, ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net