ಇಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

14 SBG-1 (1) Ramachandra
Published on

ಹಾಸನ: ಶ್ರವಣ ಬೆಳಗೊಳ ಹೋಬಳಿಯ ಅರುವನಹಳ್ಳಿ ಗ್ರಾಮದಲ್ಲಿ ಮಂಗಳವಾರ ಕುಡಿದ ಅಮಲಿನಲ್ಲಿ ಇಬ್ಬರ ನಡುವೆ ಪ್ರಾರಂಭವಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ.
ಬಾಗಲಕೋಟೆ ಜಿಲ್ಲೆಯ ಬದಾಮಿಯ ಕಳ್ಳಿಪೇಟೆ ಓಣಿಯ ನಿವಾಸಿ ರಾಮಚಂದ್ರಪ್ಪ ಸಂಜಿವಪ್ಪ (42) ಕೊಲೆಯಾದವರು. ಎರಡು ವಾರಗಳ ಹಿಂದೆ ಇಟ್ಟಿಗೆ ಕಾರ್ಖಾನೆಯಲ್ಲಿ ಕೂಲಿ ಕೆಲಸಕ್ಕೆಂದು ಒಂದೇ ಗ್ರಾಮದ ರುದ್ರಯ್ಯ ಕೊಂಗವಾಡ ಹಾಗೂ ರಾಮಚಂದ್ರ ಸಂಜಿಪ್ಪನವರ ಅವರು ಅರುವನಹಳ್ಳಿಗೆ ಬಂದಿದ್ದರು. ಇಬ್ಬರು ಸ್ನೇಹಿತರಾಗಿದ್ದರು.

ಮಂಗಳವಾರ ಮಧ್ಯಾಹ್ನ ಇಬ್ಬರು ಮದ್ಯ ಸೇವನೆ ಮಾಡಿದ್ದರು. ಈ ವೇಳೆ ಸಣ್ಣ ವಿಷಯಕ್ಕೆ ಇಬ್ಬರ ನಡುವೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತಿರುಗಿ ರುದ್ರಯ್ಯ ಆಯುಧದಿಂದ ರಾಮಚಂದ್ರಪ್ಪ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ. ಈ ವೇಳೆ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರುದ್ರಯ್ಯ ಸ್ಥಳದಿಂದ ಪರಾರಿಯಾಗಿದ್ದ.

ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಪರಿಶೀಲನೆ ನಡೆಸಿದರು. ಪೊಲೀಸರು ಬುಧವಾರ ಆರೋಪಿಯನ್ನು ಬಂಧಿಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಹಾಸನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಕುಟುಂಬಸ್ಥರು ಮೃತದೇಹವನ್ನು ಬಾಗಲಕೋಟೆಗೆ ಕೊಂಡೊಯ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net