ಮಾಸ್ಕ್ ಧರಿಸದವರಿಗೆ ದಂಡ, ಕೋವಿಡ್ ಪರೀಕ್ಷೆ

h6-covid test (4)
Published on

ಹುಬ್ಬಳ್ಳಿ: ಇಲ್ಲಿನ ಹಳೇ ಬಸ್ ನಿಲ್ದಾಣದ ಬಳಿ ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ದಂಡ ವಿಧಿಸಿ, ಕಡ್ಡಾಯ ಕೋವಿಡ್ ಪರೀಕ್ಷೆ ನಡೆಸಲಾಯಿತು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ನೇತೃತ್ವದಲ್ಲಿ ಕಂದಾಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಪರ ಊರುಗಳಿಂದ ಆಗಮಿಸಿದ ಹಾಗೂ ತೆರಳುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿ ಹೇಳಲಾಯಿತು. ಅಲ್ಲದೇ ಗಂಟಲು ಹಾಗೂ ಮೂಗಿನ ದ್ರವ ಸಂಗ್ರಹಿಸಲಾಯಿತು.

ಉಪವಿಭಾಗಾಧಿಕಾರಿ ಗೋಪಾಲಕೃಷ್ಣ, ಡಿಎಚ್​ಒ ಯಶವಂತ ಮದೀನಕರ್, ಹುಬ್ಬಳ್ಳಿ ನಗರ ತಹಸೀಲ್ದಾರ್ ಶಶಿಧರ ಮಾಡ್ಯಾಳ, ತಾಲೂಕು ವೈದ್ಯಾಧಿಕಾರಿ ಡಾ. ಪ್ರಭು ಬಿರಾದರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net