ಬೆಂಗಳೂರಿನ ಗಾಂಧಿನಗರದಲ್ಲಿ ಬೆಂಕಿ ಅವಘಡ: ಧಗಧಗಿಸಿದ ಹೋಟೆಲ್​

New Project(3)
Published on

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಅಗ್ನ ಅವಘಡ ಸಂಭವಿಸಿದೆ. ಗಾಂಧಿನಗರದ ಸುಖಸಾಗರ್ ಹೋಟೆಲ್​ನ ಐದು ಮತ್ತು ಆರನೇ ಮಹಡಿಯಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಧಗಧಗಿಸಿದೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹಾಗೂ ಉಪ್ಪಾರಪೇಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net