ಬೆಂಗಳೂರಿನ ಪಬ್​​ನಲ್ಲಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು 4ನೇ ಮಹಡಿಯಿಂದ ಜಿಗಿದ ವ್ಯಕ್ತಿ

bng
Published on

ಬೆಂಗಳೂರು: ಬೆಂಗಳೂರಿನ ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ  4 ಅಂತಸ್ತಿನ ಕಟ್ಟಡದಲ್ಲಿ  ಸಿಲಿಂಡರ್‌ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದೆ.

ಕೋರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ  ಮಡ್ ಪೈಪ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದೆ. ನೋಡ ನೋಡುತ್ತಿದ್ದಂತೆ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುತ್ತಿದ್ದಾರೆ.

ನಾಲ್ಕು ಮಹಡಿಯ ​ಕಟ್ಟಡದಲ್ಲಿ, ಗ್ರೌಂಡ್ ಮತ್ತು ಮೊದಲ ಮಹಡಿಯಲ್ಲಿ ಕಾರು ಷೋ ರೂಂ ಇದೆ. ಎರಡು ಮತ್ತು ಮೂರನೇ ಮೂರನೇ ಮಹಡಿಯಲ್ಲಿ ಹುಕ್ಕಾ ಬಾರ್ ನಡೆಸಲಾಗುತ್ತಿತ್ತು. ಸಿಲಿಂಡರ್ ಬ್ಲಾಸ್ಟ್ನಿಂದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬಿಲ್ಡಿಂಗ್‌ನ ಮೇಲೆ ಇರುವ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ.

ಮಡ್ ಪೈಪ್ ಹುಕ್ಕಾ ಕೆಫೆನಲ್ಲಿ ಧಿಡೀರನೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಾಣ ಉಳಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಓರ್ವ ವ್ಯಕ್ತಿ ಗಿಡದ ಮೇಲೆ ಜಿಗಿದಿದ್ದು, ಗಾಯಗಳಾಗಿವೆ. ಆತನನ್ನು ಕೊರಮಂಗಲದ ಸೈಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net