ಟಿಂಬರ್ ಮಳಿಗೆಗೆ ಬೆಂಕಿ ತಗುಲಿ ನಷ್ಟ

Published on

ಮೈಸೂರು: ಟಿಂಬರ್ ಮಳಿಗೆಗೆ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಪದಾರ್ಥಗಳು ಬೆಂಕಿಗಾಹುತಿಯಾಗಿವೆ.
ರಾಮಕೃಷ್ಣನಗರ ವೃತ್ತದ ಬಳಿಯಿರುವ ಯೂಸ್ರಾ ಎಂಟರ್‌ಪ್ರೈಸಸ್ ಅಂಗಡಿಯಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಮಳಿಗೆಯಲ್ಲಿದ್ದ ಮರದ ಪಟ್ಟಿಗಳು ಸೇರಿದಂತೆ ಇನ್ನಿತರ ವಸ್ತುಗಳಿಗೆ ಬೆಂಕಿ ಆವರಿಸಿದೆ. ಬೆಂಕಿ ಹೊರಗೆ ಕಾಣಿಸಿಕೊಳ್ಳುತ್ತಿರುವಂತೆಯೇ ಅಕ್ಕಪಕ್ಕದವರು ಅಗ್ನಿಶಾಮಕ ದಳಕ್ಕೆ ಸುದ್ದಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸರಸ್ವತಿಪುರಂನ ಎರಡು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಿ, ಅಕ್ಕಪಕ್ಕ ಹರಡುವುದನ್ನು ತಪ್ಪಿಸಿದ್ದಾರೆ. ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net