ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ

18 yelandur 02
Published on
  • ಚಾಮರಾಜನಗರ : ಯಳಂದೂರು ಪಟ್ಟಣದಿಂದ ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಶನಿವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸದೆ ಪ್ರಯಾಣಿಕರು ಪಾರಾಗಿದ್ದಾರೆ.

  • ಪ್ರತಿ ವಾರದಂತೆ ಈ ಶನಿವಾರವೂ ಕೂಡ ಕೆಎಸ್‌ಆರ್‌ಟಿಸಿ ಬಸ್ ಪಟ್ಟಣ ನಿಲ್ದಾಣದಿಂದ ಪ್ರಯಾಣಿಕರನ್ನು ಹತ್ತಿಸಿಕೊಂಡು ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟಕ್ಕೆ ತೆರಳುತ್ತಿತ್ತು. ಈ ವೇಳೆ ಎರೆಕಟ್ಟೆ ಸಮೀಪ ಬಸ್‌ನ ರೇಡಿಯೇಟರ್‌ನಲ್ಲಿ ಹೊಗೆ ಕಾಣಿಸಿಕೊಂಡು ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಚಾಲಕ
  • ಬಸ್‌ನಲ್ಲಿದ್ದ 50 ಪ್ರಯಾಣಿಕರನ್ನು ಕೆ ಳಗೆ ಇಳಿಸಿದ್ದಾರೆ. ನಂತರ ಬೆಂಕಿ ನಂದಿಸಿ ಸಮಯಪ್ರಜ್ಞೆ ಮೆರೆದಿದ್ದಾರೆ.

  • ಇನ್ನು ಬೆಟ್ಟಕ್ಕೆ ತೆರಳಲು ಸಜ್ಜಾಗಿದ್ದ ಪ್ರಯಾಣಿಕರನ್ನು ಅದೇ ಮಾರ್ಗವಾಗಿ ತೆರಳುವ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಳುಹಿಸಲಾಗಿದೆ ಎಂದು ಚಾಲಕರು ಮತ್ತು ನಿರ್ವಾಹಕರು ತಿಳಿಸಿದ್ದಾರೆ.

18ವೈಎಲ್‌ಡಿ ಚಿತ್ರ02 ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಎರೆಕಟ್ಟೆ ಬಳಿ ಶನಿವಾರ ಕೆಸ್ಸಾರ್ಟಿಸಿ ಬಸ್‌ಗೆ ಬೆಂಕಿ ಕಾಣಿಸಿಕೊಂಡು ರಸ್ತೆ ಬದಿಯಲ್ಲಿ ನಿಂತ ಬಸ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net