

ಹುಬ್ಬಳ್ಳಿ: ಇಂಡಿಗೋ ಸಂಸ್ಥೆ ಮೇ ಮೊದಲ ವಾರದಲ್ಲಿ ಹುಬ್ಬಳ್ಳಿಯಿಂದ ಮಂಗಳೂರು ಹಾಗೂ ಮೈಸೂರಿಗೆ ಸೇವೆ ಆರಂಭಿಸಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹುಬ್ಬಳ್ಳಿಯಿಂದ ಮಂಗಳೂರಿಗೆ ಹಾಗೂ ಹುಬ್ಬಳ್ಳಿಯಿಂದ ಮೈಸೂರಿಗೆ ವಿಮಾನ ಸೇವೆ ಆರಂಭಿಸುವಂತೆ ಇತ್ತೀಚೆಗೆ ಇಂಡಿಗೋ ವಿಮಾನಯಾನ ಸಂಸ್ಥೆಗೆ ಜೋಶಿ ಮನವಿ ಮಾಡಿದ್ದರು. ಸ್ಪಂದಿಸಿದ ಸಂಸ್ಥೆ ಮೇ 1ರಿಂದ ವಾರಕ್ಕೆ ನಾಲ್ಕು ದಿನ ಮಂಗಳೂರಿಗೆ ಹಾಗೂ ಮೇ 3ರಿಂದ ವಾರಕ್ಕೆ ಮೂರು ದಿನ ಮೈಸೂರಿಗೆ ವಿಮಾನ ಹಾರಾಟ ಪ್ರಾರಂಭಿಸಲು ಸಜ್ಜಾಗಿದೆ. ಇದಕ್ಕೆ ಕಾರಣೀಭೂತರಾದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹಾಗೂ ಇಂಡಿಗೋ ಸಂಸ್ಥೆಗೆ ಸಚಿವ ಜೋಶಿ ಧನ್ಯವಾದ ತಿಳಿಸಿದ್ದಾರೆ.