ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಪಾಲಿಕೆ ಮಾಜಿ ಸದಸ್ಯೆ

14
Published on

ಮೈಸೂರು: ಪರಿಶಿಷ್ಟ ಜಾತಿ, ಪಂಗಡದ ಅನುದಾನ ಬಿಡುಗಡೆಯಲ್ಲಿ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ನಗರಪಾಲಿಕೆ ಮಾಜಿ ಸದಸ್ಯೆ ಅಶ್ವಿನಿ ಶರತ್ ನಗರಪಾಲಿಕೆ ಮುಂಭಾಗ ಏಕಾಂಗಿಯಾಗಿ ಶನಿವಾರ ಪ್ರತಿಭಟನೆ ನಡೆಸಿದರು.
ನಗರಪಾಲಿಕೆ ಮುಖ್ಯ ದ್ವಾರದ ಮುಂದೆ ಧರಣಿ ನಡೆಸುವ ಮೂಲಕ ಅನುದಾನ ಬಿಡುಗಡೆ ಮಾಡಿಸಿ ವಾರ್ಡ್ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ, ಪಂಗಡದವರು ಹೆಚ್ಚಾಗಿರುವ ಗಾಂಧಿನಗರದ ಅಭಿವೃದ್ಧಿಗೆ ಪರಿಶಿಷ್ಟ ಜಾತಿ, ಪಂಗಡದ ವಿಶೇಷ ಅನುದಾನದಲ್ಲಿ ಹಣ ಬಿಡುಗಡೆ ಮಾಡಬೇಕಾಗಿತ್ತು. ಆದರೆ ಸಮುದಾಯಕ್ಕೆ ಮೀಸಲಾದ ಯೋಜನೆಯನ್ನು ಗಾಂಧಿನಗರ ಅಭಿವೃದ್ಧಿಗೆ ನೀಡದೆ ಅನ್ಯಾಯ ಮಾಡಿ ದಲಿತರನ್ನು ಬೀದಿಗೆ ತರಲಾಗಿದೆ ಎಂದು ನಾಮಫಲಕ ಹಿಡಿದು ಪ್ರತಿಭಟನೆ ನಡೆಸಿದರು.
ಬಳಿಕ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿ ಬಡಾವಣೆ ಅಭಿವೃದ್ಧಿಗೊಳಿಸುವಂತೆ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net