ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬುದ್ನಿ ಇನ್ನಿಲ್ಲ

tammannappa budni
Published on

ಬಾಗಲಕೋಟೆ: ಸ್ವಾತಂತ್ರ್ಯ ಹೋರಾಟಗಾರ ತಮ್ಮಣ್ಣಪ್ಪ ಬುದ್ನಿ (94) ಸೋಮವಾರ ರಾತ್ರಿ 12 ಗಂಟೆಯಲ್ಲಿ ನಿಧನರಾದರು.

ಮುಧೋಳ ತಾಲೂಕಿನ ಚಿಚಖಂಡಿ ಗ್ರಾಮದ ತಮ್ಮಣ್ಣಪ್ಪ ಬುದ್ನಿ ಅವರು ವಿನೋಭಾ ಬಾವೆ ಅವರ ಅನುಯಾಯಿ ಆಗಿದ್ದರು. ಬಾಲ್ಯದಲ್ಲೇ ಗಾಂಧೀವಾದಿಯಾಗಿದ್ದ ಅವರು ಸ್ವಾತಂತ್ರ್ಯ ಹೋರಾಟದಲ್ಲೂ ಪಾಲ್ಗೊಂಡಿದ್ದರು.

ಸ್ವಾತಂತ್ರ್ಯೋತ್ಸವ ಸಂಭ್ರಮದ ದಿನದ ರಾತ್ರಿಯೇ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 12ಕ್ಕೆ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net