ಗಗನಚುಕ್ಕಿ-ಭರಚುಕ್ಕಿಗೆ ಜೀವಕಳೆ: ಜಲವೈಭವ ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು

gaganachukki-bharachukki-falls
Published on

ಕೊಳ್ಳೇಗಾಲ: ಜಲಾನಯನ ಪ್ರದೇಶಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿ ತಾಣವಾದ ಗಗನಚುಕ್ಕಿ ಹಾಗೂ ಭರಚುಕ್ಕಿ ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ.

ಕಳೆದೊಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಪಾತಗಳಿಗೆ ಜೀವ ಕಳೆ ಬಂದಿದ್ದು, ಹಾಲಿನ ನೊರೆಯಂತೆ ಧುಮ್ಮಿಕ್ಕುತ್ತಿರುವ ಜಲ ವೈಭವವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ.

ರಜೆ ಹಿನ್ನೆಲೆಯಲ್ಲಿ ಭಾನುವಾರ ಪ್ರವಾಸಿಗರ ದಂಡೇ ನೆರೆದಿತ್ತು. ಜಲಪಾತದ ರಮಣೀಯ ದೃಶ್ಯವನ್ನು ಪ್ರವಾಸಿಗರು ಮೊಬೈಲ್​ನಲ್ಲಿ ಸೆರೆ ಹಿಡಿಯುತ್ತಿದ್ದ ದೃಶ್ಯ ಕಂಡು ಬಂತು. ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net