

ಮಂಡ್ಯ: 15 ವರ್ಷದ ಬಾಲಕಿ ಮೇಲೆ ಎದುರು ಮನೆಯ ಯುವಕನಿಂದ ನಿರಂತರವಾಗಿ ಅತ್ಯಾಚಾರವೆಸಗಲಾಗಿದ್ದು, ಸಂತ್ರಸ್ತ ಬಾಲಕಿಯೀಗ ನಾಲ್ಕು ತಿಂಗಳ ಗರ್ಭಿಣಿ!
ಇಂತಹ ಘಟನೆ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಎದುರು ಮನೆಯ ಬಾಲಕಿಯನ್ನು ಆರಂಭದಲ್ಲಿ ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ, ಈ ವಿಚಾರವನ್ನ ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ, ಮದುವೆ ಆಗುವುದಾಗಿ ನಿರಂತರ ಅತ್ಯಾಚಾರವೆಸಗಿದ್ದಾನೆ. ಇದನ್ನೂ ಓದಿರಿ ಯಾರಿಗೂ ತಿಳಿಯದಂತೆ ಪ್ರೇಯಸಿಯನ್ನ ಮನೆಯಲ್ಲೇ 10 ವರ್ಷ ಅಡಗಿಸಿಟ್ಟಿದ್ದ ಪ್ರಿಯಕರ! ಆ ಕೋಣೆಯ ರಹಸ್ಯ ಬಯಲಾಗಿದ್ದೇ ರೋಚಕ
ಇತ್ತೀಚೆಗೆ ಬಾಲಕಿ ವಾಂತಿ ಮಾಡಿಕೊಳ್ಳುತ್ತಿದ್ದಳು. ಹಾಗಾಗಿ ಪಾಲಕರು ಆಕೆಯನ್ನು ವೈದ್ಯರ ಬಳಿ ಕರೆದೊಯ್ದಿದ್ದು, ಸ್ಕ್ಯಾನಿಂಗ್ ಮಾಡಿಸಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿದೆ. ಬಳಿಕ ಪೋಷಕರಿಗೆ ಅತ್ಯಾಚಾರ ಘಟನೆ ಬಾಲಕಿ ಹೇಳಿಕೊಂಡಿದ್ದಾಳೆ. ಸಂತ್ರಸ್ತೆಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿ ಚೆನ್ನಾಪುರ ಗ್ರಾಮದ ಆಟೋ ಚಾಲಕ ಲಕ್ಷ್ಮಣನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.