ಆರೋಗ್ಯವಾಗಿರಲು ಉತ್ತಮ ಆಹಾರ ಪದ್ಧತಿ ಅಗತ್ಯ

22NGD8
ಸುತ್ತೂರಿನ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಆಹಾರ ಮೇಳವನ್ನು ಆಡಳಿತಾಧಿಕಾರಿ ಎಸ್.ಪಿ.ಉದಯಶಂಕರ್ ವೀಕ್ಷಿಸಿದರು. ಡಾ.ಎಚ್.ಎಂ.ಮಹೇಶ್, ಸಂಪತ್, ಶಿವಸ್ವಾಮಿ ಇದ್ದರು.
Published on

ನಂಜನಗೂಡು: ಉತ್ತಮ ಆಹಾರ ಪದ್ಧತಿಯನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ರೋಗರುಜಿನಗಳಿಂದ ದೂರವಿರಬಹುದು ಎಂದು ಸುತ್ತೂರು ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಎಸ್.ಪಿ.ಉದಯಶಂಕರ್ ಹೇಳಿದರು.

ತಾಲೂಕಿನ ಸುತ್ತೂರಿನಲ್ಲಿರುವ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಗುರುವಾರ ಆಯೋಜಿಸಿದ್ದ ಆಹಾರ ಮೇಳ ಉದ್ಘಾಟಿಸಿ ಮಾತನಾಡಿದರು. ನಮ್ಮ ದೈನಂದಿನ ಆಹಾರ ಕ್ರಮ ಚೆನ್ನಾಗಿದ್ದರೆ ಅನೇಕ ರೋಗಗಳಿಂದ ಮುಕ್ತರಾಗಬಹುದು. ಹೆಣ್ಣು ಮಕ್ಕಳು ಮನೆಯಲ್ಲೇ ಸತ್ವಯುತ ಆಹಾರ ತಯಾರಿಸುವುದನ್ನು ರೂಢಿಸಿಕೊಳ್ಳಬೇಕು ಎಂದರು.

ಆಹಾರ ಮೇಳದಲ್ಲಿ ವಿದ್ಯಾರ್ಥಿಗಳು ಪ್ರದರ್ಶನಕ್ಕಿಟ್ಟಿದ್ದ ಆಹಾರ ಕ್ರಮಗಳ ಕುರಿತು ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ಎಚ್.ಎಂ.ಮಹೇಶ್ ಮಾಹಿತಿ ನೀಡಿದರು. ಜೆಎಸ್‌ಎಸ್ ಶಿಕ್ಷಣ ಸಂಸ್ಥೆಯ ಹೆಚ್ಚುವರಿ ಸಂಯೋಜನಾಧಿಕಾರಿ ಸಂಪತ್, ಡಿ.ಎಲ್.ಇಡಿ ಕಾಲೇಜಿನ ಪ್ರಾಂಶುಪಾಲ ಶಿವಸ್ವಾಮಿ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net