ಉತ್ತಮ ಶಿಕ್ಷಣದಿಂದ ಮಕ್ಕಳ ಭವಿಷ್ಯ ಉಜ್ವಲ

27 BIRUR 01
ಬೀರೂರಿನಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು. ಟ್ರಸ್ಟ್‌ನ ಅಧ್ಯಕ್ಷ ಬಿ.ವಿ.ಅಶೋಕ್, ಬಾವಿಮನೆ ಮಧು, ಬಿ.ಸಿ.ಪ್ರಕಾಶ್, ಲೋಹಿತ್ ಇದ್ದರು.
Published on

ಬೀರೂರು: ಇಂದಿನ ಪೀಳಿಗೆಗೆ ಉತ್ತಮ ಶಿಕ್ಷಣ ಕಲ್ಪಿಸುವುದರ ಮೂಲಕ ಉತ್ತಮ ಭವಿಷ್ಯ ರೂಪಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಉಪ್ಪಾರ ಸಮುದಾಯದವರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವತ್ತ ಗಮನಹರಿಸಬೇಕು ಎಂದು ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮಿ ಎಜುಕೇಷನ್ ಅಂಡ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಬಿ.ವಿ.ಅಶೋಕ್ ತಿಳಿಸಿದರು.

ಪಟ್ಟಣದ ಅಶೋಕ ನಗರದ ಶ್ರೀರಾಮ ಭಜನೆ ಮಂದಿರದ ಆವರಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅತ್ಯಂತ ಹಿಂದುಳಿದ ಸಮುದಾಯವಾದ ಉಪ್ಪಾರ ಜನಾಂಗಕ್ಕೆ ಅರ್ಹ ಮೀಸಲಾತಿ ದೊರಕದ ಕಾರಣ ಪ್ರಗತಿಯಲ್ಲಿ ಹಿನ್ನಡೆಯಾಗಿದೆ. ಸಮಾಜದ ಜನತೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಮುಂದೆ ಬಂದು ಸಮಾಜ ಕಟ್ಟುವ ಕೆಲಸ ಮಾಡಬೇಕು. ಪ್ರತಿಯೊಬ್ಬ ಪಾಲಕರು ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸಬೇಕು. ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸಬಲರಾಗಿರುವವರು ದುರ್ಬಲರಿಗೆ ನೆರವು ನೀಡುವ ಮೂಲಕ ಸಹಕಾರಿಯಾಗಬೇಕು ಎಂದರು.
ಸಮಾಜದ ಮುಖಂಡ ಬಾವಿಮನೆ ಮಧು ಮಾತನಾಡಿ, ನಮ್ಮ ಟ್ರಸ್ಟ್‌ನಿಂದ ಪ್ರತಿವರ್ಷ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿ ಜೀವನದ ಅತಿ ಮುಖ್ಯವಾದ ಹಂತಗಳು. ಅಂತಹ ಮಕ್ಕಳಿಗೆ ಪ್ರೇರಣೆ ಹಾಗೂ ಆತ್ಮವಿಶ್ವಾಸ ನೀಡುವುದು ಇಂತಹ ಪ್ರತಿಭಾ ಪುರಸ್ಕಾರಗಳು. ಮಕ್ಕಳು ಇವುಗಳ ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದರು.
ಶೇ.85ಕ್ಕಿಂತ ಅಧಿಕ ಅಂಕ ಗಳಿಸಿದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. 100 ಮಕ್ಕಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು. ಬಿ.ಎನ್.ಲೋಹಿತ್, ಸಂಘದ ಗೌರಾವಾಧ್ಯಕ್ಷ ಬಿ.ಎಚ್.ರವಿ, ಪ್ರಧಾನ ಕಾರ್ಯದರ್ಶಿ ಬಿ.ಸಿ.ಪ್ರಕಾಶ್, ಬಿ.ಎಂ.ಚಂದ್ರಶೇಖರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net