ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನಕುಮಾರ್ ವಿಧಿವಶ

prasanna kumar
Published on

ತುಮಕೂರು: ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದ ಪ್ರಧಾನ ಅರ್ಚಕ ಎಚ್.ಸಿ. ಪ್ರಸನ್ನಕುಮಾರ್(68) ಶನಿವಾರ ವಿಧಿವಶರಾದರು.

ಕೆಲ ದಿನಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಪ್ರಸನ್ನಕುಮಾರ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದರು.

ಮೃತರ ಅಂತ್ಯಕ್ರಿಯೆ ಭಾನುವಾರ ಗೊರವನಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕೊರಟಗೆರೆ ತಾಲೂಕಿನ ಅರ್ಚಕರ ಸಂಘ, ಬ್ರಾಹ್ಮಣರ ಸಂಘ ಸೇರಿದಂತೆ ಹಲವು ಸಂಘಟನೆಗಳು ಪ್ರಸನ್ನಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net