ಪಾಂಡವಪುರದಲ್ಲಿ ಅದ್ದೂರಿ ಗಣೇಶೋತ್ಸವ

03_11_Pnd_01
ಪಾಂಡವಪುರ ಪಟ್ಟಣದ ಹಳೇಬಸ್ ನಿಲ್ದಾಣದಲ್ಲಿ ಗಣಪತಿ ಪೆಂಡಾಲ್‌ನಲ್ಲಿ ಸಿದ್ದಿವಿನಾಯಕ ಸೇವಾ ಸಮಿತಿ ವತಿಯಿಂದ ಅನ್ನದಾಸೋಹ ನಡೆಯಿತು.
Published on

ಪಾಂಡವಪುರ: ಪಟ್ಟಣದ ಹಳೇಬಸ್ ನಿಲ್ದಾಣದಲ್ಲಿ ಸಿದ್ಧಿ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪನೆ ಮಾಡಿರುವ ಗಣೇಶೋತ್ಸವದ ಅಂಗವಾಗಿ ಶುಕ್ರವಾರ ಗಣ ಹೋಮ ಹಾಗೂ ಅನ್ನದಾಸೋಹ ಆಯೋಜಿಸಲಾಗಿತ್ತು.

ಗಣಪತಿ ಪೆಂಡಾಲ್‌ನಲ್ಲಿ ಹೋಮ ನಡೆಯಿತು. ಬಳಿಕ ಐದು ಸಾವಿರಕ್ಕೂ ಹೆಚ್ಚು ಜನರಿಗೆ ಅನ್ನದಾಸೋಹ ಮಾಡಲಾಯಿತು. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಗಣಪತಿಗೆ ಪೂಜೆ ಸಲ್ಲಿಸಿದರು. ಅಂತೆಯೇ ಅವರನ್ನು ಸಮಿತಿ ಪದಾಧಿಕಾರಿಗಳು ಅಭಿನಂದಿಸಿದರು.

ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ, ಪದಾಧಿಕಾರಿಗಳಾದ ಶಾಂತಿಪ್ರಸಾದ್, ಪುರುಷೋತ್ತಮ್, ನಟರಾಜು, ಬಾಲಾಜಿ, ಮನು, ಮನೋಜ್, ದೇವೇಗೌಡ, ಮಾಣಿಕ್ಯನಹಳ್ಳಿ ಅಶೋಕ್, ಪ್ರಭಾಕರ್, ಮನುಜಾ, ಫ್ರೆಂಚ್‌ರಾಕ್ಸ್ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಟಿ.ಪಿ.ರೇವಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net