

ರಾಯಚೂರು: ಟ್ರೇಡ್ ಯೂನಿಯನ್ ಸೆಂಟರ್ ಆ್ ಇಂಡಿಯಾದ ರಾಜ್ಯ ಸಮ್ಮೇಳನ ನಿಮಿತ್ತ ನಗರದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ಕಾರ್ಮಿಕರಿಂದ ಬೃಹತ್ ಮೆರವಣಿಗೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಿಂದ ಆರಂಭವಾಗಿ ಮೆರವಣಿಗೆ ಪ್ರಮುಖ ಬೀದಿಗಳ ವೀರಶೈವ ಮಹಾಂತೇಶ ಕಲ್ಯಾಣ ಮಂಟಪಕ್ಕೆ ತೆರಳಿತು. ಮೆರವಣಿಗೆಯಲ್ಲಿ ಕಾರ್ಮಿಕರ ಪರ ಹಾಗೂ ಕೇಂದ್ರ ಸರ್ಕಾರದ ಕಾರ್ಮಿಕ ವಿರೋ ನೀತಿಗಳ ವಿರುದ್ಧ ಘೋಷಣೆ ಕೂಗಲಾಯಿತು.
ಕಾರ್ಮಿಕ ವಿರೋ ನೀತಿ ಸಂಹಿತೆಗಳನ್ನು ರದ್ದುಗೊಳಿಸಬೇಕು. ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ, ಕಾರ್ಮಿಕರನ್ನು ಕಾಯಂಗೊಳಿಸಬೇಕು. ಮಾಸಿಕ ವೇತನ 31 ಸಾವಿರ ರೂ. ನಿಗದಿಪಡಿಸಬೇಕು ಎಂದು ಕಾರ್ಮಿಕರು ಒತ್ತಾಯಿಸಿದರು.
ಮೆರವಣಿಗೆಯಲ್ಲಿ ಸಿಪಿಐಎಂಎಲ್ ರೆಡ್‌ಸ್ಟಾರ್ ರಾಜ್ಯ ಕಾರ್ಯದರ್ಶಿ ಬಿ.ರುದ್ರಯ್ಯ, ಟಿಯುಸಿಐ ರಾಜ್ಯಾಧ್ಯಕ್ಷ ಆರ್.ಮಾನಸಯ್ಯ, ಪದಾಕಾರಿಗಳಾದ ಚಿನ್ನಪ್ಪ ಕೊಟ್ರಕಿ, ಅಮೀರ್ ಅಲಿ, ಜಿ.ಅಮರೇಶ, ಅಜೀಜ್ ಜಾಗೀರದಾರ್, ಆರ್.ಹುಚ್ಚರೆಡ್ಡಿ, ನಿರಂಜನಕುಮಾರ ಸೇರಿದಂತೆ ಕಾರ್ಮಿಕರು ಪಾಲ್ಗೊಂಡಿದ್ದರು.