ಭುವನೇಶ್ವರಿಯ ಅದ್ದೂರಿ ಮೆರವಣಿಗೆ

26Kush001 (1)
ಕುಶಾಲನಗರದ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಮೆರವಣಿಗೆ.
Published on

ಕುಶಾಲನಗರ: ಕುಶಾಲನಗರದ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಎರಡನೇ ದಿನವಾದ ಭಾನುವಾರ ಭುವನೇಶ್ವರಿಯ ಅದ್ದೂರಿ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಡೆಯಿತು.

ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್ ಮೆರವಣಿಗೆಗೆ ಚಾಲನೆ ನೀಡಿದರು. ಅಲಂಕೃತ ವಾಹನದಲ್ಲಿ ಕನ್ನಡಾಂಬೆಯ ಮೆರವಣಿಗೆ ನಡೆಯಿತು. ಕಲ್ಲಡ್ಕ ಗೊಂಬೆ ಕುಣಿತ, ಅಲಂಕೃತ ಆಟೋಗಳು, ಡಿಜೆ ಮೆರವಣಿಗೆಗೆ ಮೆರುಗು ನೀಡಿತು.

ಉತ್ತಮವಾಗಿ ಅಲಂಕಾರ ಮಾಡಿದ್ದ ಆಟೋಗಳಿಗೆ ಸಂಘದ ವತಿಯಿಂದ ಬಹುಮಾನ ವಿತರಿಸಲಾಯಿತು. ಅಧ್ಯಕ್ಷ ಕೃಷ್ಣ ದರ್ಶನ್, ಪ್ರಧಾನ ಕಾರ್ಯದರ್ಶಿ ಸಂತೋಷ್‌ಕುಮಾರ್‌ಗೌಡ, ಖಜಾಂಚಿ ಮುನೀರ್ ಮತ್ತು ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net