

ಧಾರವಾಡ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ತ ಧಾರವಾಡ ಜಿಲ್ಲೆಗೆ ಬುಧವಾರ ಬೆಳಗ್ಗೆ ಆಗಮಿಸಿದ ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಸ್ವಾಗತ ಕೋರಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಸ್ವಾಗತಿಸಲಾಯಿತು. ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ತಹಸೀಲ್ದಾರ ಡಿ.ಎಚ್. ಹೂಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕನ್ನಡ ಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಇತರರು ಇದ್ದರು.