

ಮದ್ದೂರು: ಪಟ್ಟಣಕ್ಕೆ ಆಗಮಿಸಿದ ನೂತನ ಸಂಸದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಹಾಗೂ ಕುಮಾರಸ್ವಾಮಿ ಅಭಿಮಾನಿಗಳು ಹಾರ ತುರಾಯಿ ಹಾಕಿ ಪಟಾಕಿ ಸಿಡಿಸಿ ಸಂಭ್ರಮದಿಂದ ಸ್ವಾಗತಿಸಿದರು.
ಪಟ್ಟಣದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಸಾವಿರಾರು ಸಂಖ್ಯೆಯ ಅಭಿಮಾನಿಗಳು ಮತ್ತು ಮುಖಂಡರು ಎಚ್.ಡಿ.ಕುಮಾರಸ್ವಾಮಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರ ಜಯಘೋಷಗಳನ್ನು ಮೊಳಗಿಸಿ ಸಂಭ್ರಮಿಸಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಪುರಸಭಾ ಸದಸ್ಯರಾದ ಪ್ರಿಯಾಂಕ ಅಪ್ಪುಗೌಡ, ಸುರೇಶ್‌ಕುಮಾರ್, ಮುಖಂಡರಾದ ಬ್ಯಾಡರಹಳ್ಳಿ ರಾಮಕೃಷ್ಣ, ಬಸವರಾಜು, ಅಪ್ಪು ಪಿ.ಗೌಡ, ಉಮೇಶ್, ಪ್ರಸನ್ನ, ದೇವರಾಜು ಸೇರಿದಂತೆ ಇತರರು ಇದ್ದರು.