ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ

Published on

ಬಳ್ಳಾರಿ : ಮಂಡ್ಯದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಭಾನುವಾರ ಸಂಜೆ ಜಿಲ್ಲೆಗೆ ಆಗಮಿಸಿತು.

ಜಿಲ್ಲಾಡಳಿತದಿಂದ ಕನ್ನಡ ಜ್ಯೋತಿ ರಥಕ್ಕೆ ಜಿಲ್ಲಾಡಳಿತ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು. ನಗರದ ಮುನ್ಸಿಪಲ್ ಕಾಲೇಜು ಮೈದಾನದ ಆವರಣದಲ್ಲಿ ಗಣ್ಯರೆಲ್ಲರೂ ಸೇರಿ ಕನ್ನಡ ತಾಯಿ ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿದರು.

ಬಳ್ಳಾರಿ ತಾಲೂಕು ತಹಶೀಲ್ದಾರ ಗುರುರಾಜ ಮಾತನಾಡಿ, ಕನ್ನಡ ಭಾಷೆ ಬೆಳೆಸುವಲ್ಲಿ ಪ್ರತಿಯೊಬ್ಬರೂ ಕಂಕಣ ಬದ್ದರಾಗಿ ನಿಲ್ಲಬೇಕು, ಕನ್ನಡ ಉಳಿಸಿ ಬೆಳೆಸುವ ಇಂತಹ ಕಾರ್ಯಕ್ರಮವು ಎಲ್ಲರಲ್ಲೂ ಸಂತೋಷ ಉಂಟು ಮಾಡಿದೆ ಎಂದರು. ಬಳಿಕ ಕನ್ನಡ ಜ್ಯೋತಿ ರಥವನ್ನು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯು ನಗರದ ಮುನ್ಸಿಪಲ್ ಮೈದಾನದ ಆವರಣದಿಂದ ಆರಂಭವಾಗಿ ಡಿಸಿ ಕಚೇರಿ ಆವರಣಕ್ಕೆ ತಲುಪಿ ಸಂಪನ್ನಗೊಂಡಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ತಾಷೆ ರಾಮ್ಡೋಲ್ ಸೇರಿದಂತೆ ಹಲವು ಕಲಾ ವಾದ್ಯಗಳು ಸಾಂಸ್ಕೃತಿಕ ಮೆರಗು ತಂದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net