ಮದ್ದೂರಿನಲ್ಲಿ ಕನ್ನಡ ರಥಕ್ಕೆ ಅದ್ದೂರಿ ಸ್ವಾಗತ

16M.D.R.2
ಉತ್ತರ ಕನ್ನಡ ಜಿಲ್ಲೆಯಿಂದ ಪ್ರಾರಂಭವಾದ ಕನ್ನಡ ರಥ ಮದ್ದೂರು ಪಟ್ಟಣಕ್ಕೆ ಆಗಮಿಸಿದಾಗ ಕನ್ನಡ ಸಾಹಿತ್ಯ ಪರಿಷತ್ತು, ಪುರಸಭೆ ಆಡಳಿತ ಮಂಡಳಿ ಹಾಗೂ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸ್ವಾಗತಿಸಲಾಯಿತು. ಟಿ.ಆರ್.ಪ್ರಸನ್ನಕುಮಾರ್, ಸಿದ್ದರಾಜು, ಸುನಿಲ್‌ಕುಮಾರ್, ವಿ.ಸಿ.ಉಮಾಶಂಕರ್, ಮೀನಾಕ್ಷಿ, ಹುರಗಲವಾಡಿ ರಾಮಯ್ಯ ಇದ್ದರು.
Published on

ಮದ್ದೂರು: ಉತ್ತರ ಕನ್ನಡ ಜಿಲ್ಲೆಯಿಂದ ಪ್ರಾರಂಭವಾದ ಕನ್ನಡ ರಥ ಸೋಮವಾರ ಪಟ್ಟಣಕ್ಕೆ ಆಗಮಿಸಿದಾಗ ಕನ್ನಡ ಸಾಹಿತ್ಯ ಪರಿಷತ್ತು, ಪುರಸಭೆ ಆಡಳಿತ ಮಂಡಳಿ ಹಾಗೂ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸ್ವಾಗತಿಸಲಾಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಹ ಕಾರ್ಯದರ್ಶಿ ವಿ.ಸಿ.ಉಮಾಶಂಕರ ಮಾತನಾಡಿ, ನಾಡಿನ ಎಲ್ಲ ಜಿಲ್ಲೆಗಳು ಮತ್ತು ಪ್ರತಿ ತಾಲೂಕು ಕೇಂದ್ರಗಳಲ್ಲಿ ಸಂಚರಿಸಿದ ಕನ್ನಡ ರಥಕ್ಕೆ ನಾಡಿನ ಎಲ್ಲೆಡೆ ಭವ್ಯ ಸ್ವಾಗತವನ್ನು ಕನ್ನಡಿಗರು ನೀಡುತ್ತಿರುವುದು ಸಂತೋಷದ ಸಂಗತಿ ಎಂದರು.

ಜಿಲ್ಲೆ ಸಾಂಸ್ಕೃತಿಕ ಮತ್ತು ಕೃಷಿ ಪ್ರಧಾನವಾದ ಜಿಲ್ಲೆ. ಅದರಲ್ಲೂ ವಿಶೇಷವಾಗಿ ಶೇ.90 ರಷ್ಟು ಕನ್ನಡ ಮಾತನಾಡುವ ಜಿಲ್ಲೆಯಲ್ಲಿ 30 ವರ್ಷದ ಬಳಿಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿರುವುದು ನಮ್ಮೆಲ್ಲರ ಹೆಮ್ಮೆ. ಮಂಡ್ಯದಲ್ಲಿ ನಡೆಯುತ್ತಿರುವ ಸಮ್ಮೇಳನ ಇಡೀ ವಿಶ್ವಕ್ಕೆ ಮಾದರಿಯಾಗಿ ಮೆಚ್ಚುಗೆ ವ್ಯಕ್ತಪಡಿಸುವ ಕೆಲಸ ನಮ್ಮೆಲ್ಲರಿಂದ ಆಗಬೇಕು ಎಂದು ಮನವಿ ಮಾಡಿದರು.

ಪುರಸಭೆ ಉಪಾಧ್ಯಕ್ಷ ತೈಲೂರು ಪ್ರಸನ್ನ, ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದರಾಜು, ಮುಖ್ಯಾಧಿಕಾರಿ ಮೀನಾಕ್ಷಿ, ಕಸಾಪ ತಾಲೂಕು ಅಧ್ಯಕ್ಷ ಸುನಿಲ್‌ಕುಮಾರ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸೋಂಪುರ ಉಮೇಶ್, ಗಾಯಕ ಹುರುಗಲವಾಡಿ ರಾಮಯ್ಯ, ಮುಖಂಡರಾದ ಪಟೇಲ್ ಹರೀಶ್, ಅಜ್ಜಳ್ಳಿ ಕರಿಗೌಡ, ಯರಗನಹಳ್ಳಿ ಮಹಾಲಿಂಗು, ಬ್ಯಾಂಕ್ ಚಿಕ್ಕಣ,್ಣ ಹಾಗಲಹಳ್ಳಿ ಬಸವರಾಜು, ವಿ.ಎಂ.ರಮೇಶ್, ರೈತ ಮುಖಂಡರಾದ ಕೆ.ಜಿ.ಉಮೇಶ್, ಬಿದರಕೋಟೆ ರಮೇಶ, ಚಾಪುರದೊಡ್ಡಿ ಲೋಕೇಶ್ ಸೇರಿದಂತೆ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net