ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ

A grand welcome to the Kannada Rath Yatra
ಬಾಗಲಕೋಟೆ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಕನ್ನಡ ಜ್ಯೋತಿ ಯಾತ್ರೆಯನ್ನು ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿ.ಪಂ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಪಂ ಯೋಜನಾಧಿಕಾರಿ ಎನ್.ವೈ.ಬಸರಿಗಿಡದ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತುಂಬರಮಟ್ಟಿ, ತಹಸೀಲ್ದಾರ್ ಅಮರೇಶ ಪಮ್ಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ, ನಗರಸಭೆ ಆಯುಕ್ತ ರಮೇಶ ಜಾಧವ, ಇತರ ಅಧಿಕಾರಿಗಳು ಕನ್ನಡಾಂಬೆಗೆ ಪೂಜೆ ಸಲ್ಲಿಸಿ ಪುಷ್ಪ ಅರ್ಪಿಸಿದರು.
Published on

ಬಾಗಲಕೋಟೆ: ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಯಾತ್ರೆ ಮಂಗಳವಾರ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದಾಗ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಕನ್ನಡ ಜ್ಯೋತಿ ಯಾತ್ರೆಗೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿಪಂ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿಪಂ ಯೋಜನಾಧಿಕಾರಿ ಎನ್.ವೈ.ಬಸರಿಗಿಡದ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತುಂಬರಮಟ್ಟಿ, ತಹಸೀಲ್ದಾರ್ ಅಮರೇಶ ಪಮ್ಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ, ನಗರಸಭೆ ಆಯುಕ್ತ ರಮೇಶ ಜಾಧವ ಇತರ ಅಧಿಕಾರಿಗಳು ಕನ್ನಡಾಂಬೆಗೆ ಪೂಜೆ ಸಲ್ಲಿಸಿ ಪುಷ್ಪ ಅರ್ಪಿಸಿದರು.

ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಮಾತನಾಡಿ, ಕರ್ನಾಟಕ ಸಂಭ್ರಮ-50ರ ಹಿನ್ನೆಲೆಯಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ, ಕನ್ನಡಿಗ ಹಾಗೂ ಕರ್ನಾಟಕದ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರ ಕನ್ನಡ ಜ್ಯೋತಿ ಯಾತ್ರೆ ಹಮ್ಮಿಕೊಂಡಿದೆ ಎಂದು ತಿಳಿಸಿದರು. ನಂತರ ನಗರದ ನಾನಾ ಕಡೆಗಳಲ್ಲಿ ಜ್ಯೋತಿ ರಥಯಾತ್ರೆ ಸಂಚರಿಸಿತು.

ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು, ಛದ್ಮವೇಷಧಾರಿ ಮಕ್ಕಳು ಹಾಗೂ ವಿವಿಧ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net