ರಾಜ್ಯ ಬಿಜೆಪಿ ಉಪಾಧ್ಯಕ್ಷರಿಗೆ ಅದ್ದೂರಿ ಸ್ವಾಗತ

3-ANP-P2
ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರಿಗೆ ಆನಂದಪುರದಲ್ಲಿ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಟಿ.ಡಿ.ಮೇಘರಾಜ್, ರತ್ನಾಕರ ಹೊನಗೋಡು, ಭರ್ಮಪ್ಪ ಅಂದಾಸುರ, ಮೋಹನ್‌ಕುಮಾರ್, ಶಾಂತಕುಮಾರ್ ಇತರರಿದ್ದರು.
Published on

ಆನಂದಪುರ: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ನಂತರ ಇದೇ ಮೊದಲ ಬಾರಿಗೆ ಸ್ವಕ್ಷೇತ್ರ ಸಾಗರಕ್ಕೆ ಆಗಮಿಸುತ್ತಿರುವ ಹರತಾಳು ಹಾಲಪ್ಪ ಅವರನ್ನು ಮಂಗಳವಾರ ಆನಂದಪುರದಲ್ಲಿ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.
ತಾಲೂಕಿನ ಗಡಿ ಪ್ರದೇಶವಾದ ಗಿಳಾಲಗುಂಡಿಯಲ್ಲಿ ಹಾಲಪ್ಪ ಅವರನ್ನು ಬರ ಮಾಡಿಕೊಂಡು ಆನಂದಪುರವರೆಗೆ ಬೈಕ್ ರ‍್ಯಾಲಿ ಮೂಲಕ ಕರೆತರಲಾಯಿತು. ನಾಟಿ ವೈದ್ಯ ನಾರಾಯಣಮೂರ್ತಿ ಅವರ ಮನೆಯಂಗಳದಲ್ಲಿ ಹಾಲಪ್ಪ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಹಾಲಪ್ಪ ಮಾತನಾಡಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾರ್ಗದರ್ಶನ ಹಾಗೂ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ನಮ್ಮ ಯುವ ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದೆ ಎಂದರು.
ಸಾಗರ ಕ್ಷೇತ್ರದಲ್ಲಿ ದೌರ್ಜನ್ಯ ಮತ್ತು ಪಕ್ಷಪಾತ ಧೋರಣೆ ಅಽಕವಾಗಿದೆ. ಮುಂದಿನ ದಿನಗಳಲ್ಲಿ ಇದರ ವಿರುದ್ಧ ಹೋರಾಟ ನಡೆಸಲಾಗುವುದು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದಾದ್ಯಂತ ಬಿಜೆಪಿ ಅಭ್ಯರ್ಥಿಗಳು ಅಽಕ ಸಂಖ್ಯೆಯಲ್ಲಿ ಗೆಲುವು ಸಾಽಸಲಿದ್ದಾರೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಿ ದೇಶವನ್ನು ಸದೃಢಗೊಳಿಸಬೇಕಾಗಿದೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಜಿಪಂ ಮಾಜಿ ಸದಸ್ಯ ರತ್ನಾಕರ ಹೊನಗೋಡು, ಭರ್ಮಪ್ಪ ಅಂದಾಸುರ, ಆನಂದಪುರ ಗ್ರಾಪಂ ಅಧ್ಯಕ್ಷ ಮೋಹನ್‌ಕುಮಾರ್, ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಶಾಂತಕುಮಾರ್ ಆಚಾಪುರ, ರೇವಪ್ಪ ಹೊಸಕೊಪ್ಪ, ಜ್ಯೋತಿ ರಘು, ಚೇತನಾ, ಲೋಕಪ್ಪ ನ್ಯಾರಿ, ಬಿ.ಸಿ.ರಮೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net