ಕ್ರಿಯಾಶೀಲ ವ್ಯಕ್ತಿಯಿಂದ ಶ್ರೇಷ್ಠ ಸಾಧನೆ: ಗೋಪಾಲ್ ಯು. ಹೇಳಿಕೆ

Gur_achievement
Published on

ಗುರುಪುರ: ಕಾಯಕವೇ ಕೈಲಾಸ ಎಂದಿರುವ ಬಸವಣ್ಣನವರ ನುಡಿ ಇಂದಿನ ವಿದ್ಯಾರ್ಥಿ ಜೀವನಕ್ಕೆ ಹೆಚ್ಚು ಪ್ರಸ್ತುತ. ನಮ್ಮ ಕರ್ತವ್ಯ ನಿಷ್ಠೆಯಿಂದ ಮಾಡಿದಾಗ ಪೂರ್ಣತೆ ಕಾಣಲು ಸಾಧ್ಯ. ಕ್ರಿಯಾಶೀಲ ವ್ಯಕ್ತಿಯಿಂದ ಶ್ರೇಷ್ಠ ಸಾಧನೆ ನಿರೀಕ್ಷಿಸಬಹುದು ಎಂದು ತಿರುವೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಗೋಪಾಲ್ ಯು. ಹೇಳಿದರು.

ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ, ವಾರ್ಷಿಕ ಕ್ರೀಡಾಕೂಟದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಶಾಲಾ ಆಡಳಿತಾಧಿಕಾರಿ ನರೇಶ್ ಮಲ್ಲಿಗೆಮಾಡು ಅಧ್ಯಕ್ಷತೆ ವಹಿಸಿದ್ದರು. ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ನಿಶಾನ್, ಧನುಷ್ ಅವರನ್ನು ಅಭಿನಂದಿಸಲಾಯಿತು. ರಕ್ಷಕ-ಶಿಕ್ಷಕ ಸಂಘ ಅಧ್ಯಕ್ಷೆ ಶೀಲಾವತಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಹರಿಣಾಕ್ಷಿ, ಹಿರಿಯ ಶಿಕ್ಷಕ ವಿಠಲ ವಾಗ್ಮೋರೆ, ಶಾಲಾ ವಿದ್ಯಾರ್ಥಿ ನಾಯಕರಾದ ಭವಿತಾ, ಯಕ್ಷಿತ್ ಉಪಸ್ಥಿತರಿದ್ದರು.

ಪ್ರೌಢಶಾಲಾ ಮುಖ್ಯಶಿಕ್ಷಕ ರಮೇಶ್ ಆಚಾರ್ಯ ಸ್ವಾಗತಿಸಿದರು. ಮಧು ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಶೇಖರ ಕಡ್ತಲ ವಂದಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net