ನೀರಾವರಿ ಸೌಲಭ್ಯ ಕಲ್ಪಿಸಿದ ಮಹಾನ್ ನಾಯಕ

29 mnd 1
Published on

ಮುಂಡಗೋಡ: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ತಾಲೂಕಿನಲ್ಲಿ ಹಲವು ಜಲಾಶಯಗಳನ್ನು ನಿರ್ಮಿಸುವ ಮೂಲಕ ಸಾವಿರಾರು ರೈತರಿಗೆ ಅನುಕೂಲ ಮಾಡಿಕೊಟ್ಟಂಥ ಮಹಾನ್ ವ್ಯಕ್ತಿ ಎಂದು ಮಾಜಿ ಶಾಸಕ ವಿ.ಎಸ್. ಪಾಟೀಲ ಹೇಳಿದರು.

ಪಟ್ಟಣದ ಗೋವಿಂದ ಶರೀಫ ಶಿವಯೋಗಿಗಳ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಮಕೃಷ್ಣ ಹೆಗಡೆ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಲಾಶಯಗಳನ್ನು ನಿರ್ಮಿಸಿ ನೀರಾವರಿ ಸೌಲಭ್ಯ ಕಲ್ಪಿಸಿದ ಮಹಾನ್ ನಾಯಕ ರಾಮಕೃಷ್ಣ ಹೆಗಡೆ ಅವರ ಮಾರ್ಗದಲ್ಲಿ ಎಲ್ಲರೂ ನಡೆಯಬೇಕು ಎಂದರು.

ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ದೇವಸ್ಥಾನದ ಅಧ್ಯಕ್ಷ ಚಿದಾನಂದ ಹರಿಜನ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ, ಬಸವರಾಜ ಓಶಿಮಠ, ನಾಗರಾಜ ಕಲಾಲ, ಎಸ್.ಎಸ್. ಪಾಟೀಲ, ಗೊವಿಂದಪ್ಪ ಬೆಂಡ್ಲಗಟ್ಟಿ, ಅಂಬರೀಶ ಹರಿಜನ, ದಯಾನಂದ ಕಳಸಾಪುರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net