

ಭಟ್ಕಳ: ಮಾಧ್ಯಮವು ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕನೇ ಆಧಾರಸ್ತಂಭವಾಗಿದೆ. ಜನರಿಗೆ ಹೊಸ ವಿಷಯ, ಮಾಹಿತಿಯನ್ನು ತಿಳಿಸುವ ಮತ್ತು ಜನರ ಆಶೋತ್ತರಗಳನ್ನು ಈಡೇರಿಸುವ ಉತ್ತಮ ವೇದಿಕೆಯಾಗಿದೆ ಎಂದು ಇಡಗುಂಜಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರಾಂಶುಪಾಲ ಹೊಸಬಯ್ಯ ಪಟಗಾರ ಹೇಳಿದರು.
ತಾಲೂಕಿನ ಶ್ರೀಗುರು ಸುಧೀಂದ್ರ ಪದವಿ ಮಹಾವಿದ್ಯಾಲಯದ ಬಿಎ ಪತ್ರಿಕೋದ್ಯಮ ವಿಭಾಗದ ವತಿಯಿಂದ ಆಯೋಜಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತ ರಾಧಾಕೃಷ್ಣ ಭಟ್ ಮಾತನಾಡಿ, ಪತ್ರಿಕೋದ್ಯಮದ ಸಮಗ್ರ ಚಿತ್ರಣವನ್ನು ಒಂದೇ ಸೂರಿನಡಿ ಪ್ರದರ್ಶಿಸಿರುವುದು ಗಮನಾರ್ಹವಾದುದು ಎಂದರು
ಭಟ್ಕಳ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿ ರಮೇಶ್ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜ್ ಪ್ರಾಂಶುಪಾಲ ಶ್ರೀನಾಥ್ ಪೈ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ಕಪಿಲ್ ಭಟ್ ಹಾಗೂ ಲಿಧಿಯಾ ನಿರೂಪಿಸಿದರು. ಇಶಿತಾ ನಾಯ್ಕ ವಂದಿಸಿದರು.