ಅನಿಷ್ಟ ಪದ್ಧತಿ ಜಾತಿ ತೊಲಗಿಸಿದ ಮಹಾನ್ ಸಂತ

A great saint who got rid of evil practices
ಕೆರೂರ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಕನಕದಾಸ ಜಯಂತಿ ಆಚರಿಸಲಾಯಿತು.
Published on

ಕೆರೂರ: ಕನಕದಾಸರ ಸಾಹಿತ್ಯ, ಕೀರ್ತನೆಗಳು ಸಮಾಜದಲ್ಲಿನ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸುವಲ್ಲಿ ಬಹಳಷ್ಟು ಸಹಕಾರಿ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಾ.ಎಂ.ಜಿ. ಕಿತ್ತಲಿ ಹೇಳಿದರು.

ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಕನಕದಾಸರ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಕನಕದಾಸರು ಜಾತಿ ವ್ಯವಸ್ಥೆ ವಿರುದ್ಧ ಧ್ವನಿ ಎತ್ತಿ, ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಭಾವ ಮೂಡಿಸಿದ ಮಹಾನ್ ಕವಿಗಳು ಎಂದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ ಮಾಡಬಾಳ ಮಾತನಾಡಿ, ಕನಕದಾಸರು ಕನ್ನಡ ಸಾಹಿತ್ಯಕ್ಕೆ ಕೀರ್ತನೆಗಳಂತ ಶ್ರೇಷ್ಠ ಕೊಡುಗೆ ಕೊಟ್ಟಿದ್ದಾರೆ. ಅವರ ತತ್ವಾದರ್ಶಗಳು ಎಲ್ಲ ವರ್ಗದ ಜನರಿಗೆ ದಾರಿದೀಪ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಮದಿ, ಉಪಾಧ್ಯಕ್ಷ ಮೋದಿನಸಾಬ್ ಚಿಕ್ಕೂರ, ಸದಸ್ಯರಾದ ವಿಠ್ಠಲಗೌಡ ಗೌಡರ, ಕುಮಾರ ಐಹೊಳ್ಳಿ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸದಾನಂದ ಮದಿ, ಮುಖಂಡರಾದ ಹನುಮಂತ ಪ್ರಭಾಕರ, ರಾಚಪ್ಪ ಶೆಟ್ಟರ್, ಸುರೇಶ ಪೂಜೇರಿ, ಶಶಿ ಉದಗಟ್ಟಿ, ನಾಗೇಶ ಚಂದಾವರಿ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net