ಜಗದೋದ್ಧಾರನ ಜಪಿಸಿದ ಭಕ್ತ ಸಮೂಹ

Untitled design (4)
ಬಳ್ಳಾರಿಯಲ್ಲಿ ಬುಧವಾರ ಶ್ರೀಕೃಷ್ಣ ಜಯಂತಿ ಆಚರಿಸಲಾಯಿತು. ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪ ಮೇಯರ್ ಜಾನಕಿ, ಗೊಲ್ಲರ ಸಂಘದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಯಾದವ್ ಇತರರಿದ್ದರು.
Published on

ಬಳ್ಳಾರಿ: ನಗರ ಸೇರಿ ಜಿಲ್ಲಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.


ನಗರದ ಡಾ.ರಾಜ್‌ಕುಮಾರ್ ರಸ್ತೆಯ ಬಿಡಿಎಎ ಮೈದಾನದ ವೇದಿಕೆ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಶ್ರೀಕೃಷ್ಣ ಜಯಂತಿ ಆಚರಿಸಲಾಯಿತು. ಪಾಲಿಕೆ ಮೇಯರ್ ಡಿ.ತ್ರಿವೇಣಿ ಮಾತನಾಡಿ, ಮಹಾಭಾರತ ಯುದ್ಧದಲ್ಲಿ ಅರ್ಜುನನಿಗೆ ದಾರಿ ತೋರಿದಂತೆ ಶ್ರೀಕೃಷ್ಣ ಎಲ್ಲರ ಜೀವನವನ್ನು ಸುಖಮಯವನ್ನಾಗಿಸಲಿ ಎಂದು ಆಶಯ ವ್ಯಕ್ತಪಡಿಸಿದರು.


ಪಾಲಿಕೆ ಉಪ ಮೇಯರ್ ಜಾನಕಿ ಮಾತನಾಡಿದರು. ಜಿಲ್ಲಾ ಗೊಲ್ಲರ ಸಂಘದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಯಾದವ್ ಉಪನ್ಯಾಸ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಮಹ್ಮದ್ ಜುಬೇರ್, ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ.ಹೊನ್ನೂರಪ್ಪ ಇತರರಿದ್ದರು.


ಗಮನ ಸೆಳೆದ ಕಲಾ ತಂಡಗಳು: ಶ್ರೀಕೃಷ್ಣ ಜಯಂತಿ ನಿಮಿತ್ತ ಬಳ್ಳಾರಿಯಲ್ಲಿ ಏರ್ಪಡಿಸಿದ್ದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಕಂಸಾಳೆ ಕುಣಿತ ಹಾಗೂ ತಾಷಾರಾಂಡೋಲ್ ಸೇರಿದಂತೆ ಸಾಂಸ್ಕೃತಿಕ ಕಲಾ ತಂಡಗಳು ನೋಡುಗರನ್ನು ಗಮನಸೆಳೆದವು. ಪಾಲಿಕೆ ಮೇಯರ್ ಡಿ.ತ್ರಿವೇಣಿ ಚಾಲನೆ ನೀಡಿದರು.

ಮೆರವಣಿಗೆಯು ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾಗಿ ಗಡಿಗಿ ಚನ್ನಪ್ಪ ವೃತ್ತದ ಮೂಲಕ ಡಾ.ರಾಜಕುಮಾರ್ ರಸ್ತೆಯ ಬಿಡಿಎಎ ಮೈದಾನದ ವೇದಿಕೆ ಸಭಾಂಗಣದವರೆಗೆ ತಲುಪಿ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ಸಾಯಿ ಶ್ರುತಿ ಮತ್ತು ತಂಡ ಭಕ್ತಿಗೀತೆಗಳನ್ನು ಪ್ರಸ್ತುತಪಡಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net