ಬಡ ಕುಟುಂಬಗಳಿಗೆ ಚೈತನ್ಯ ನೀಡಿದ ಗ್ಯಾರಂಟಿ ಯೋಜನೆ

29 nrp 4...
Published on

ಎನ್.ಆರ್.ಪುರ: ರಾಜ್ಯದ ಪ್ರತಿ ಬಡ ಕುಟುಂಬಕ್ಕೂ ಆರ್ಥಿಕ ಚೈತನ್ಯ ತುಂಬಬೇಕು ಎಂದು ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

ತಾಪಂ ಆವರಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟಿಸಿ ಮಾತನಾಡಿ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ಬಂದಿದೆ. ಶೃಂಗೇರಿ ಕ್ಷೇತ್ರದಲ್ಲಿ ಶಕ್ತಿ ಯೋಜನೆಯಡಿ 1.48 ಕೋಟಿ ಸಾವಿರ ಮಹಿಳೆಯರು ಉಚಿತ ಬಸ್‌ಪ್ರಯಾಣ ಮಾಡಿದ್ದಾರೆ. ಗೃಹಜ್ಯೋತಿ ಯೋಜನೆಗೆ 1.92 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 4 ಕೋಟಿ ರೂ., ಗೃಹಲಕ್ಷ್ಮಿ ಯೋಜನೆಗೆ ಪ್ರತಿ ತಿಂಗಳು 9 ಕೋಟಿ ರೂ, ಯುವನಿಧಿ ಯೋಜನೆಯಡಿ 52.24ಲಕ್ಷ ರೂ.ಖರ್ಚು ವೆಚ್ಚ ಮಾಡಲಾಗುತ್ತಿದೆ ಎಂದರು.

ಶಿವಮೊಗ್ಗ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಮನ ಮುಟ್ಟಿದೆ. ನುಡಿದಂತೆ ನಡೆದಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತನ್ನು ತಲುಪಿಸುವ ಕಾರ್ಯವಾಗುತ್ತಿದೆ. ಗ್ಯಾರಂಟಿ ಯೋಜನೆ ಸವಲತ್ತುಗಳು ತಾಲೂಕಿನ 14 ಗ್ರಾಪಂಗಳು ಸೇರಿದಂತೆ, ಒಂದು ಪಪಂ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗಿದೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷೆ ಚಂದ್ರಮ್ಮ ಹಾಗೂ ಸದಸ್ಯರಾದ ಜಿ.ನಾಗರಾಜ್, ಸಂದೀಪ್, ದೇವರಾಜ, ಅರುಣ ಪೂಜಾರಿ, ಗೌತಮ್, ಅಪೂರ್ವ, ಹೂವಮ್ಮ, ರಘು, ಜಯರಾಂ, ಕುಮಾರ್, ಟಿ.ಟಿ.ಇಸ್ಮಾಯಿಲ್, ನಿತ್ಯಾನಂದ, ಬೇಸಿಲ್, ಸೈಯದ್ ಸಫೀರ್ ಅವರನ್ನು ಶಾಸಕರು ಸನ್ಮಾನಿಸಿದರು.

ಶಿವಮೊಗ್ಗ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಪಪಂ ಅಧ್ಯಕ್ಷೆ ಸುರೈಯಾ ಭಾನು, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ ಶೆಟ್ಟಿ, ತಹಸೀಲ್ದಾರ್ ತನುಜ ಟಿ.ಸವದತ್ತಿ, ತಾಪಂ ಇಒ ನವೀನ್ ಕುಮಾರ್, ತಾಲೂಕು ಬಗರ್‌ಹುಕಂ ಸಮಿತಿ ಅಧ್ಯಕ್ಷ ಇ.ಸಿ.ಜೋಯಿ, ಪಪಂ ಸದಸ್ಯ ಜುಬೇದ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net