

ಶಿರಸಿ: ಚಲನಚಿತ್ರ ನಟ ಶಿವರಾಜ ಕುಮಾರ್ ಕುಟುಂಬ ಸಮೇತ ಶಿರಸಿಯ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿ, ದೇವಿಗೆ ಪೂಜೆ ಸಲ್ಲಿಸಿದರು.
ಶನಿವಾರ ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪನವರ ಜನ್ಮದಿನದ ಹಿನ್ನಲೆಯಲ್ಲಿ ಶಿರಸಿಗೆ ಆಗಮಿಸಿರುವ ಅವರು, ಪತ್ನಿ ಗೀತಾ ಅವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಸಚಿವ ಮಧು ಬಂಗಾರಪ್ಪ, ಶಾಸಕ ಭೀಮಣ್ಣ ನಾಯ್ಕ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ದೇವಸ್ಥಾನ ಆಡಳಿತ ಮಂಡಳಿ ಶಿವಾನಂದ ಶೆಟ್ಟಿ, ಸುಧೀರ ಹಂದ್ರಾಳ ಸೇರಿದಂತೆ ಹಲವಾರು ಅಭಿಮಾನಿಗಳು, ಕಾರ್ಯಕರ್ತರು ಇದ್ದರು.