ರಾಜ್ಯದಲ್ಲಿ ಇನ್ನೂ 4 ದಿನ ಮಳೆ: ನಾಳೆ-ನಾಡಿದ್ದು ಹಲವೆಡೆ ಭಾರಿ ಮಳೆ ಬೀಳುವ ಸಾಧ್ಯತೆ

Heavyrain
Published on

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಮುಂದುವರಿಯಲಿದೆ. ಸೋಮವಾರವೂ ವಿವಿಧ ಜಿಲ್ಲೆಗಳಲ್ಲಿ ಮಳೆ ಬಿದ್ದಿದ್ದು, ಉಡುಪಿಯ ಸಿದ್ದಾಪುರದಲ್ಲಿ 7 ಸೆಂ.ಮೀ. ಸುರಿದಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿತ್ರದುರ್ಗದಲ್ಲಿ ಆ.23ರಂದು ಹಾಗೂ ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಘೋಷಿಸಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಆ.23ರಿಂದ 26ರವರೆಗೆ ಸಾಧಾರಣ ಮಳೆಯಾಗಲಿದೆ.

ಜೂ.1ರಿಂದ ಆ.22ರವರೆಗೆ ರಾಜ್ಯಾದ್ಯಂತ 642 ಮಿ.ಮೀ. ಮಳೆ ಬದಲಾಗಿ 747 ಮಿ.ಮೀ. ಮಳೆಯಾಗಿದ್ದು, ಶೇ.16 ವಾಡಿಕೆಗಿಂತ ಹೆಚ್ಚು ಸುರಿದಿದೆ. ಆದರೆ, ಒಂದು ವಾರದಿಂದ ರಾಜ್ಯದಲ್ಲಿ ಶೇ.67 ವಾಡಿಕೆಗಿಂತ ಕಡಿಮೆ ಸುರಿದಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net