ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ 2ನೇ ಅಭ್ಯರ್ಥಿ ಗೆಲ್ಲುವ ಪ್ರಶ್ನೆಯೇ ಇಲ್ಲ: ಎಚ್​ಡಿಕೆ

HDK
Published on

ಹುಬ್ಬಳ್ಳಿ: ರಾಜ್ಯಸಭೆ ಚುನಾವಣೆಯ 4 ಸ್ಥಾನದಲ್ಲಿ ಬಿಜೆಪಿ-2, ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ 1 ಸ್ಥಾನ ಗೆಲ್ಲಲಿವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್​ನ 2ನೇ ಅಭ್ಯರ್ಥಿ ಗೆಲ್ಲುವ ಪ್ರಶ್ನೆಯೇ ಇಲ್ಲ. ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ನಮ್ಮಲ್ಲಿ ಯಾವುದೇ ಗೊಂದವಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ನನಗೂ ಆತ್ಮೀಯರಿದ್ದಾರೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದರು.

ಶನಿವಾರ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಚ್​ಡಿಕೆ, ಆರೋಗ್ಯ ತಪಾಸಣೆಗಾಗಿ 4 ದಿನ ಸಿಂಗಾಪುರಕ್ಕೆ ಹೋಗಿದ್ದೆ. ಶುಕ್ರವಾರ ರಾತ್ರಿ ಬೆಂಗಳೂರಿಗೆ ಬಂದಿದ್ದೇನೆ. ರಾಜ್ಯಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಕಾಂಗ್ರೆಸ್ ಮುಖಂಡರೊಂದಿಗೆ ನಾನು ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್​ನಲ್ಲಿ 32 ಮತಗಳಿವೆ. ನಾಲ್ಕೈದು ಜನರಿಗೆ ಅಸಮಾಧಾನ ಇರಬಹುದು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದ್ದೇವೆ. 2016ರ ವಿದ್ಯಮಾನ ಮರಳಿಸುವುದಿಲ್ಲ ಎಂದು ಎಚ್​ಡಿಕೆ ಹೇಳಿದರು.

ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ಗಡದಿನ್ನಿ, ಹು-ಧಾ ಮಹಾನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಗುರುರಾಜ ಹುಣಸಿಮರದ, ಮುಖಂಡ ತಬ್ರೇಜ್ ಸಂಶಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net