ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

romance case
Published on

ಮೈಸೂರು: ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ವೈರಲ್​ ಆಗಿದ್ದು, ಕಾಮುಕ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ವಿದ್ಯಾದೇಗುಲದಲ್ಲಿ ಅಸಹ್ಯ ವರ್ತನೆ ಸಲ್ಲದು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ

ಎಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಶಾಲೆಯೊಂದರ ಕೊಠಡಿಯೊಳಗೆ ವಿದ್ಯಾರ್ಥಿನಿಯನ್ನ ತಬ್ಬಿಕೊಂಡು ಮುದ್ದಾಡುತ್ತಿದ್ದ ದೃಶ್ಯವನ್ನು ಹೊರಗಿನಿಂದ ಕಿಟಕಿ ಬಳಿ ನಿಂತು ಕೆಲ ವಿದ್ಯಾರ್ಥಿಗಳು ವಿಡಿಯೋ ಮಾಡಿದ್ದಾರೆ. ಕಿಟಕಿ ಬಳಿ ವಿಡಿಯೋ ಮಾಡುತ್ತಿರುವುದನ್ನ ನೋಡಿದ ಕೂಡಲೇ ವಿದ್ಯಾರ್ಥಿನಿಯನ್ನ ಬಿಟ್ಟ ಮುಖ್ಯಶಿಕ್ಷಕ ಸುಮ್ಮನೆ ನಿಲ್ಲುತ್ತಾನೆ. ಅಷ್ಟರಲ್ಲಿ ಆ ವಿದ್ಯಾರ್ಥಿನಿ ಕೊಠಡಿಯಿಂದ ಹೊರ ಹೋಗುತ್ತಾಳೆ. ಇದಿಷ್ಟು ವಿಡಿಯೋದಲ್ಲಿದ್ದು, ವೈರಲ್​ ಆಗಿದೆ.

ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​ ಮಾಡುತ್ತಿದ್ದ ವಿಡಿಯೋ ಸಹಿತ ಕ್ಷೇತ್ರ ಶಿಕ್ಷಣಾಧಿಕಾರಿಗೆ ಶಿಕ್ಷಕನ ವಿರುದ್ಧ ದೂರು ಕೊಡಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net