ಸ್ವಚ್ಛತೆಯಿಂದ ಆರೋಗ್ಯದಾಯಕ ಬದುಕು ಸಾಧ್ಯ

1ark6
ಅರಕಲಗೂಡು ಕುವೆಂಪು ಉದ್ಯಾನದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮಕ್ಕೆ ಭಾನುವಾರ ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ ಚಾಲನೆ ನೀಡಿದರು. ಕೃಷ್ಣಯ್ಯ, ಪ್ರದೀಪ್ ಕುಮಾರ್, ಅನಿಕೇತನ್ ಇತರರಿದ್ದರು.
Published on

ಅರಕಲಗೂಡು: ಪಟ್ಟಣದ ಜನವಸತಿ ಪ್ರದೇಶಗಳಲ್ಲಿ ರೋಗ ರುಜಿನಗಳು ಉಲ್ಬಣಗೊಳ್ಳದಂತೆ ಸ್ವಚ್ಛವಾಗಿ ಇಟ್ಟುಕೊಳ್ಳಲು ನಾಗರಿಕರು ಸಹಕರಿಸಬೇಕು ಎಂದು ತಹಸೀಲ್ದಾರ್ ಬಸವರೆಡ್ಡಪ್ಪ ರೋಣದ ಹೇಳಿದರು.

ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಪಕ್ಕದ ಕುವೆಂಪು ಉದ್ಯಾನದಲ್ಲಿ ಭಾನುವಾರ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಆರೋಗ್ಯದಾಯಕ ಬದುಕು ಸಾಧ್ಯ. ಸ್ವಚ್ಛತೆಯನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ ದಿನ ನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಪಪಂ ಸದಸ್ಯರಾದ ಹೂವಣ್ಣ, ಕೃಷ್ಣಯ್ಯ, ಎಚ್.ಎಸ್. ರಶ್ಮಿ, ಸುಬಾನ್‌ಷರೀಫ್, ಪ್ರದೀಪ್ ಕುಮಾರ್, ಅನಿಕೇತನ್, ಅಬ್ದುಲ್ ಬಾಸಿದ್, ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ಹೇಮಂತ್ ಕುಮಾರ್, ಅಬಕಾರಿ ಇಲಾಖೆ ಅಧಿಕಾರಿ ಪದ್ಮಾ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಸೀತಾರಾಮ್ ಭಟ್, ಪಪಂ ಮುಖ್ಯಾಧಿಕಾರಿ ಬಸವರಾಜ ಟಾಕಪ್ಪ, ಆರೋಗ್ಯಾಧಿಕಾರಿ ಆರ್. ದಿನೇಶ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉದ್ಯಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net