ಆರೋಗ್ಯವಂತ ಸಮಾಜಕ್ಕೆ ಪೌಷ್ಟಿಕ ಆಹಾರ ಅಗತ್ಯ

ಅರಕಲಗೂಡಿನಲ್ಲಿ ಆಯೋಜಿಸಿದ್ದ ಪೌಷ್ಟಿಕ ಆಹಾರ ದಿನದ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಬಿ. ಕೆ. ನಾಗೇಶಮೂರ್ತಿ ಉದ್ಘಾಟಿಸಿದರು. ಚಂಪಾಶ್ರೀ, ಶಂಕರಯ್ಯ, ವೆಂಕಟೇಶ್ ಇತರರು ಇದ್ದರು.
ಅರಕಲಗೂಡಿನಲ್ಲಿ ಆಯೋಜಿಸಿದ್ದ ಪೌಷ್ಟಿಕ ಆಹಾರ ದಿನದ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಬಿ. ಕೆ. ನಾಗೇಶಮೂರ್ತಿ ಉದ್ಘಾಟಿಸಿದರು. ಚಂಪಾಶ್ರೀ, ಶಂಕರಯ್ಯ, ವೆಂಕಟೇಶ್ ಇತರರು ಇದ್ದರು.
Published on

ಅರಕಲಗೂಡು: ಮಹಿಳೆಯರು ಹಾಗೂ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿ ಕಂಡುಬರುತ್ತಿದ್ದು, ಇವರ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ.ನಾಗೇಶಮೂರ್ತಿ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ

ಸಮಿತಿ, ವಕೀಲರ ಸಂಘ, ಅಭಿಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಸಿದ್ದ ಪೌಷ್ಟಿಕ ಆಹಾರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ಪೌಷ್ಟಿಕ ಆಹಾರ ಸೇವನೆ ಮಹತ್ವದ್ದಾಗಿದೆ. ಬದುಕಿನ ಒತ್ತಡದಲ್ಲಿ ಉತ್ತಮ ಆಹಾರ ಸೇವನೆಗೆ ಗಮನ ನೀಡದೆ ಜಂಕ್‌ಫುಡ್ ಸೇವಿಸುವುದರಿಂದಲೂ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ. ಅಪೌಷ್ಟಿಕತೆ ದೇಶದ ಅಭಿವೃದ್ಧಿಗೂ ಹಿನ್ನೆಡೆ ಆಗಲಿದೆ. ಪೌಷ್ಟಿಕಾಂಶಯುಕ್ತ ಆಹಾರ ಸೇವೆನೆಗೆ ಪ್ರತಿಯೊಬ್ಬರೂ ಗಮನ ನೀಡುವುದು ಅಗತ್ಯ ಎಂದರು.

ಸಿವಿಲ್ ನ್ಯಾಯಾಧೀಶೆ ಚಂಪಾಶ್ರೀ ಮಾತನಾಡಿ, ಅಪೌಷ್ಟಿಕತೆ ಕುರಿತು ಪ್ರತಿಯೊಬ್ಬರೂ ಅರಿವು ಮೂಡಿಸಿಕೊಂಡು ಉತ್ತಮ ಆಹಾರ ಸೇವನೆಗೆ ಗಮನ ನೀಡುವುದು ಅಗತ್ಯ. ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಕಾರ್ಯ ನಡೆಯಬೇಕು ಎಂದರು.

ಮಕ್ಕಳಿಗೆ ಪೌಷ್ಟಿಕ ಆಹಾರದ ಅವಶ್ಯಕತೆ ಮತ್ತು ಮಹತ್ವ ಕುರಿತು ವಕೀಲ ಶಂಕರಯ್ಯ ಉಪನ್ಯಾಸ ನೀಡಿದರು. ಸಿಡಿಪಿಒ ವೆಂಕಟೇಶ್ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಎಂ.ವೈ.ಪ್ರಶಾಂತ್ ಕುಮಾರ್ , ಕಾರ್ಯದರ್ಶಿ ಕೆ.ಆರ್. ಶ್ರೀಧರ್, ಖಜಾಂಚಿ ಸೋಮಶೇಖರ್, ಸರ್ಕಾರಿ ವಕೀಲ ಸಿ.ಎಸ್.ಸತೀಶ್ ಕುಮಾರ್ ಉಪಸ್ಥಿತರಿದ್ದರು. ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರಿಗೆ ಸೀಮಂತ ನಡೆಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರಿಂದ ಪೌಷ್ಟಿಕ ಆಹಾರ ಪ್ರದರ್ಶನ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net