

ಬಳ್ಳಾರಿ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕಾರ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಮುಖ್ಯಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸಿ.ಎಸ್.ಮುಧೋಳ್ ಮೃತರು. ಬಳ್ಳಾರಿಯ ಎಸ್.ಎಂ.ವಿ.ವಿ. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಮುಧೋಳ್ ಅವರನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆ ಮೇಲ್ವಿಚಾರಕರನ್ನಾಗಿ ನೇಮಿಸಲಾಗಿತ್ತು. ಮೊದಲ ದಿನವಾದ ಸೋಮವಾರ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಾರ್ಗಮಧ್ಯೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದರು. ಕೂಡಲೇ ಅವರನ್ನ ಆಸ್ಪತ್ರೆಗೆ ಸೇರಿಸಲಾಯಿತ್ತಾದರೂ ಬದುಕಲಿಲ್ಲ. ಮೈಸೂರು ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿನಿ ಅನುಶ್ರೀ ಕುಸಿದು ಬಿದ್ದು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಮುಖ್ಯ ಶಿಕ್ಷಕ ಮುಧೋಳ್ ಕೂಡ ಅಸುನೀಗಿದ್ದಾರೆ.