

ಮಂಡ್ಯ: ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಹೃದಯಾಘತಕ್ಕೀಡಾಗಿ ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.
ಎಲೆಚಾಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರಾಜೇಶ್(47) ಮೃತರು. ಗುರುವಾರ ತರಗತಿಯಲ್ಲಿ ಮಕ್ಕಳಿಗೆ ಎಂದಿನಂತೆ ಪಾಠ ಮಾಡುತ್ತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಕೆರೆದೊಯ್ಯಲಾಯಿತ್ತಾದರೂ ಬದುಕುಲಿಲ್ಲ. ಅಂದು ರಾತ್ರಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು.
ಶಿಕ್ಷಕ ರಾಜೇಶ್ಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮೃತರ ಅಂತ್ಯಸಂಸ್ಕಾರ ಕನಕಪುರ ತಾಲೂಕು ದೊಡ್ಡಾಲಹಳ್ಳಿಯಲ್ಲಿ ಶುಕ್ರವಾರ ನೆರವೇರಿತು. ಅತ್ತ ಶಾಲೆಯಲ್ಲಿ ಶಿಕ್ಷಕರ ಸಾವಿನ ಸುದ್ದಿ ಕೇಳಿ ಮಕ್ಕಳು ಆಘಾತಕ್ಕೀಡಾಗಿದ್ದಾರೆ. ಗ್ರಾಮಸ್ಥರೂ ನೊಂದುಕೊಂಡಿದ್ದಾರೆ.