

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ತಗ್ಗಿದೆ. ಮಲೆನಾಡು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇಳಿಕೆಯಾಗಿದೆ. ಆದರೆ, ಗೌರಿ-ಗಣೇಶ ಹಬ್ಬದ ದಿನಗಳಂದು ಹಲವೆಡೆ ವ್ಯಾಪಕ ಮಳೆಯಾಗಲಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸೆ.9ರಿಂದ ಸೆ.12ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲಿ ಮಳೆ ಕುಂಠಿತವಾಗಿದೆ.