ದೇವಸ್ಥಾನದಮೇಲೆ ಉರುಳಿತು ಭಾರೀ ಮರ

Big tree fell in a temple
Published on

ಯಲ್ಲಾಪುರ: ತಾಲೂಕಿನಲ್ಲಿ ಬುಧವಾರ ಮುಂದುವರಿದಿರುವ ಭಾರಿ ಮಳೆಯಿಂದ ವಿವಿಧೆಡೆ ಹಾನಿ ಸಂಭವಿಸಿದೆ.

ಸಹಸ್ರಳ್ಳಿಯ ವೆಂಕಟರಮಣ ಮಹಾಬಲೇಶ್ವರ ಭಟ್ಟ ಅವರಿಗೆ ಸೇರಿದ ಹಸು ಮೇಯಲು ಹೋದ ಸಂದರ್ಭದಲ್ಲಿ ಹಳ್ಳದಲ್ಲಿ ಬಿದ್ದು ಮೃತಪಟ್ಟಿದೆ.

ಹಾಸಣಗಿ ಗ್ರಾ.ಪಂ ವ್ಯಾಪ್ತಿಯ ಹೊಟಗೇರಿಯ ಕರಿಯಮ್ಮ ದೇವಸ್ಥಾನದ ಮೇಲೆ ಬೃಹತ್ ಮರವೊಂದು ಬಿದ್ದು, ದೇವಾಲಯಕ್ಕೆ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net