ಕಾಫಿ ತೋಟದಲ್ಲಿ ಬೀಡುಬಿಟ್ಟ ಕಾಡಾನೆ ಹಿಂಡು

ಚಿತ್ರ 11ಎಸ್ ಡಿ ಪಿ 2
ಕಾಫಿ ತೋಟದಲ್ಲಿ ಬೀಡುಬಿಟ್ಟ ಕಾಡಾನೆ ಹಿಂಡು
Published on

ಸಿದ್ದಾಪುರ : ಇಲ್ಲಿನ ಕರಡಿಗೋಡು, ಚಿಕ್ಕನಹಳ್ಳಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟು ದಾಂಧಲೆ ನಡೆಸುತ್ತಿದ್ದು ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. ಕಾಫಿ ಹಣ್ಣಾಗಿದ್ದು ಕೊಯ್ಲಿನ ಸಮಯವಾಗಿರುವುದರಿಂದ ಕಾಡಾನೆಗಳ ಹಿಂಡು ತೋಟದಲ್ಲಿ ಬೀಡುಬಿಟ್ಟ ಹಿನ್ನೆಲೆಯಲ್ಲಿ ಕಾರ್ಮಿಕರು ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೆ ಈ ಬಾರಿ ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿದ್ದು ಫಸಲು ಕೈಗೆಟುಕುವ ಮುನ್ನವೆ ಕಾಡಾನೆಗಳು ಫಸಲು ನಾಶಪಡಿಸುತ್ತಿವೆ ಎಂದು ಬೆಳೆಗಾರರು ಅಳಲು ತೋಡಿಕೊಂಡಿದ್ದಾರೆ.

ಕಾಡಾನೆಗಳನ್ನು ಅರಣ್ಯ ಇಲಾಖೆ ಕೂಡಲೇ ಕಾಡಿಗಟ್ಟಬೇಕು ಹಾಗೂ ಕಾಡಾನೆಗಳು ಕಾಫಿ ತೋಟಗಳಿಗೆ ಲಗ್ಗೆ ಇಡದಂತೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಬೆಳೆಗಾರರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net