ವೀರ ವನಿತೆ ಓಬವ್ವ ಸ್ತ್ರೀಕುಲಕ್ಕೆ ಮಾದರಿ

BLY-11-4
ಬಳ್ಳಾರಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ಹೊಂಗಿರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಪಾಲಿಕೆ ಉಪ ಮೇಯರ್ ಬಿ.ಜಾನಕಿ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು.
Published on

ಬಳ್ಳಾರಿ : ವೀರ ವನಿತೆ ಒನಕೆ ಓಬವ್ವ ಅವರ ವೀರತನ ಎಲ್ಲರಿಗೂ ಮಾದರಿಯಾಗಿದೆ. ಪ್ರತಿಯೊಬ್ಬ ಹೆಣ್ಣು ಮಕ್ಕಳು ಧೈರ್ಯ ಮತ್ತು ಸಾಹಸವನ್ನು ಆಳವಡಿಸಿಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಉಪ ಮೇಯರ್ ಬಿ.ಜಾನಕಿ ಅವರು ತಿಳಿಸಿದರು.

ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯ ಆವರಣದ ಹೊಂಗಿರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚಿತ್ರದುರ್ಗ ಸಾಮ್ರಾಜ್ಯದಲ್ಲಿ ಹೈದರಾಲಿ ಸೈನ್ಯ ಕೋಟೆಯ ಮೇಲೆ ದಾಳಿ ಮಾಡಿದಾಗ ವೀರತನದಿಂದ ಸೈನ್ಯವನ್ನು ಹಿಮ್ಮೆಟ್ಟಿದ ದಿಟ್ಟ ಮಹಿಳೆ. ಅವರ ನಿಷ್ಠೆ, ಪರಾಕ್ರಮ, ವೀರತನ, ಸಮಯ ಪ್ರಜ್ಞೆಯನ್ನು ನಮ್ಮೆಲ್ಲರಿಗೂ ದಾರಿದೀಪ. ಓಬವ್ವ ತೋರಿದ ಧೈರ್ಯ ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಚೋರನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಎಂ.ರಾಜಣ್ಣ ಅವರು ಓಬವ್ವ ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಂಪ್ಲಿ ತಾಲೂಕು ತಹಸೀಲ್ದಾರ್ ಗೌಸಿಯಾಬೇಗಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೊನ್ನೂರಪ್ಪ.ಟಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಶಿವಾಜಿರಾವ್ ಸೇರಿದಂತೆ ಸಮಾಜದ ಗಣ್ಯರು, ಇಲಾಖೆಯ ಸಿಬ್ಬಂದಿ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net