ಹಿಜಾಬ್​ ವಿವಾದ: 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ವಿರುದ್ಧ ಎಫ್​ಐಆರ್​

hijab tumkur
Published on

ತುಮಕೂರು: ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗುರುವಾರ ಪ್ರತಿಭಟನೆ ನಡೆಸಿದ್ದ ಎಂಪ್ರೆಸ್​ ಕಾಲೇಜಿನ 15 ವಿದ್ಯಾರ್ಥಿನಿಯರ ಮೇಲೆ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು, ಹಿಜಾಬ್​ ವಿವಾದ ಮತ್ತಷ್ಟು ಭುಗಿಲೇಳುವ ಆತಂಕ ಎದುರಾಗಿದೆ.

ಶಾಲಾ- ಕಾಲೇಜು ಸುತ್ತಮುತ್ತಲ 200 ಮೀ. ವ್ಯಾಪ್ತಿಯಲ್ಲಿ 144ಕಾಯ್ದೆ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲಾಗಿದೆ ಎಂದು ದೂರು ದಾಖಲಿಸಿಕೊಳ್ಳಲಾಗಿದೆ.

ತುಮಕೂರಿನ ಎಂಪ್ರೆಸ್ ಸರ್ಕಾರಿ ಕಾಲೇಜು ಬಳಿ ಗುಂಪು ಸೇರಿದ್ದ ವಿದ್ಯಾರ್ಥಿನಿಯರು ಇಜಾಬ್ ಧರಿಸಿ ಕಾಲೇಜಿನಲ್ಲಿ ಪಾಠ ಕೇಳಲು ಅವಕಾಶ ಕೊಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.ಈ ವೇಳೆ ಪೊಲೀಸರ ಜತೆ ವಾಗ್ವಾದ ನಡೆಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net