'ಜೈ ಶ್ರೀರಾಮ್' ಘೋಷಣೆ ವೇಳೆ 'ಅಲ್ಲಾಹು ಅಕ್ಬರ್' ಎಂದು ಕೂಗಿದ ವಿದ್ಯಾರ್ಥಿನಿ!

mandya hijab
Published on

ಮಂಡ್ಯ: ವಿದ್ಯಾ ದೇಗುಲಗಳಲ್ಲಿ ಹಿಜಾಬ್​ ವಿವಾದ ಭುಗಿಲೆದ್ದಿದೆ. ಮಂಡ್ಯದಲ್ಲಿ ಮಂಗಳವಾರವೂ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಇದಕ್ಕೆ ಪ್ರತಿಯಾಗಿ ಹಿಂದು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಜೈಶ್ರೀರಾಮ್​ ಘೋಷಣೆ ಕೂಗಿದ್ದಾರೆ. ಈ ವೇಳೆ ಹಿಜಾಬ್​ಧಾರಿ ವಿದ್ಯಾರ್ಥಿನಿಯೊಬ್ಬರು 'ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್, ಅಲ್ಲಾಹು ಅಕ್ಬರ್... ಎಂದು ಘೋಷಣೆ ಕೂಗಿದ್ದರಿಂದ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಕೂಡಲೇ ಕಾಲೇಜು ಸಿಬ್ಬಂದಿ ವಿದ್ಯಾರ್ಥಿನಿಯನ್ನು ಒಳಗೆ ಕಳುಹಿಸಿದರು.

ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರನ್ನು ಒಳಗೆ ಬಿಟ್ಟ ಆಡಳಿತ ಮಂಡಳಿಯು, ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳನ್ನು ತಡೆಯಿತು.

ಎಲ್ಲಿಯವರೆಗೆ ಹಿಜಾಬ್ ತೆಗೆಯಲ್ಲ ಅಲ್ಲಿಯವರೆಗೆ ನಾವು ಕೇಸರಿ ಶಾಲು ತೆಗೆಯಲ್ಲ. ಒಬ್ಬರಿಗೊಂದು ಇನ್ನೊಬ್ಬರಿಗೆ ಒಂದು ನ್ಯಾಯ ಏಕೆ? ಇಲ್ಲಿ ಎಲ್ಲರೂ ಸಮಾನರು ಎಂದು ಕಾಲೇಜು ಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗುತ್ತಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net